- Kannada News Photo gallery Cricket photos IPL 2024: The support from RCB fans is unwavering: Virat Kohli
Virat Kohli: RCB ಅಭಿಮಾನಿಗಳೇ, ನಿಮ್ಮ ಬೆಂಬಲಕ್ಕೆ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೀನಿ..!
IPL 2024: ಈ ಬಾರಿಯ ಐಪಿಎಲ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. 15 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕೊಹ್ಲಿ ಒಟ್ಟು 741 ರನ್ ಬಾರಿಸಿದ್ದಾರೆ. ಈ ವೇಳೆ 1 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅದರಂತೆ ಇದೀಗ ಆರೆಂಜ್ ಕ್ಯಾಪ್ ರೇಸ್ನಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.
Updated on: May 23, 2024 | 11:02 AM

IPL 2024: ಐಪಿಎಲ್ ಸೀಸನ್ 17 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊರಬಿದ್ದಿದೆ. ಈ ಬಾರಿಯ ಟೂರ್ನಿಯಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ಆರ್ಸಿಬಿ ತಂಡಕ್ಕೆ ನಿರೀಕ್ಷಿತ ಆರಂಭ ಸಿಕ್ಕಿರಲಿಲ್ಲ. ಅಲ್ಲದೆ ಮೊದಲಾರ್ಧದ 7 ಪಂದ್ಯಗಳಲ್ಲಿ 6 ರಲ್ಲಿ ಸೋಲನುಭವಿಸಿತ್ತು.

ಆದರೆ ದ್ವಿತೀಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆರ್ಸಿಬಿ 7 ಮ್ಯಾಚ್ಗಳಲ್ಲಿ 6 ರಲ್ಲಿ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿ ಪ್ಲೇಆಫ್ಗೆ ಪ್ರವೇಶಿಸಿತು. ಆದರೆ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ಇದೀಗ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ.

ಈ ಸೋಲಿನ ನೋವಿನ ನಡುವೆಯೂ ವಿರಾಟ್ ಕೊಹ್ಲಿ ಆರ್ಸಿಬಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಟೂರ್ನಿಯುದ್ಧಕ್ಕೂ ಬೆಂಬಲ ನೀಡಿರುವ ನಮ್ಮ ಫ್ಯಾನ್ಸ್ಗೆ ನಾನು ಕೃತಜ್ಞನಾಗಿರುತ್ತೀನಿ ಎಂದು ಕಿಂಗ್ ಕೊಹ್ಲಿ ಹೇಳಿದ್ದಾರೆ.

ಈ ಬಾರಿ ನಾವು ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಎಂದಿನಂತೆ ಈ ಸಲ ಕೂಡ ನಮ್ಮ ಅಭಿಮಾನಿಗಳ ಬೆಂಬಲ ಅಚಲವಾಗಿತ್ತು. ನಾವು ಸೋತರೂ, ಗೆದ್ದರೂ ಅವರ ಪ್ರೀತಿ ಭಿನ್ನವಾಗಿರಲಿಲ್ಲ. ಇಡೀ ಸೀಸನ್ನಲ್ಲಿ ಅವರ ಬೆಂಬಲವು ಅಚಲವಾಗಿತ್ತು.

ತವರು ಮೈದಾನದಲ್ಲಿ ಮಾತ್ರವಲ್ಲದೆ ಇತರೆ ಸ್ಟೇಡಿಯಂನಲ್ಲೂ ನೀವು ಅಪಾರ ಸಂಖ್ಯೆಯಲ್ಲಿ ಬೆಂಬಲ ನೀಡಿದ್ದೀರಿ. ನಿಮ್ಮ ಈ ಅಭೂತಪೂರ್ವ ಬೆಂಬಲಕ್ಕಾಗಿ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೀನಿ. ನಿಮ್ಮ ಬೆಂಬಲ ಮತ್ತು ಹಾರೈಕೆಗೆ ತುಂಬಾ ಹೃದಯದ ಧನ್ಯವಾದಗಳು ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ಈ ಬಾರಿಯ ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 15 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 1 ಶತಕ ಮತ್ತು 5 ಅರ್ಧಶತಕಗಳೊಂದಿಗೆ 741 ರನ್ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅದರಂತೆ ಈ ಸಲ ಆರೆಂಜ್ ಕ್ಯಾಪ್ ಕಿಂಗ್ ಕೊಹ್ಲಿಯ ಪಾಲಾಗುವ ನಿರೀಕ್ಷೆಯಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




