AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB ಅಭಿಮಾನಿಗಳೇ, ನಿಮ್ಮ ಬೆಂಬಲಕ್ಕೆ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೀನಿ..!

IPL 2024: ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. 15 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕೊಹ್ಲಿ ಒಟ್ಟು 741 ರನ್ ಬಾರಿಸಿದ್ದಾರೆ. ಈ ವೇಳೆ 1 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅದರಂತೆ ಇದೀಗ ಆರೆಂಜ್ ಕ್ಯಾಪ್ ರೇಸ್​ನಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: May 23, 2024 | 11:02 AM

Share
IPL 2024: ಐಪಿಎಲ್ ಸೀಸನ್ 17 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊರಬಿದ್ದಿದೆ. ಈ ಬಾರಿಯ ಟೂರ್ನಿಯಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ಆರ್​ಸಿಬಿ ತಂಡಕ್ಕೆ ನಿರೀಕ್ಷಿತ ಆರಂಭ ಸಿಕ್ಕಿರಲಿಲ್ಲ. ಅಲ್ಲದೆ ಮೊದಲಾರ್ಧದ 7 ಪಂದ್ಯಗಳಲ್ಲಿ 6 ರಲ್ಲಿ ಸೋಲನುಭವಿಸಿತ್ತು.

1 / 6
ಆದರೆ ದ್ವಿತೀಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆರ್​ಸಿಬಿ 7 ಮ್ಯಾಚ್​ಗಳಲ್ಲಿ 6 ರಲ್ಲಿ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿ ಪ್ಲೇಆಫ್​ಗೆ ಪ್ರವೇಶಿಸಿತು. ಆದರೆ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ಇದೀಗ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ.

2 / 6
ಈ ಸೋಲಿನ ನೋವಿನ ನಡುವೆಯೂ ವಿರಾಟ್ ಕೊಹ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಟೂರ್ನಿಯುದ್ಧಕ್ಕೂ ಬೆಂಬಲ ನೀಡಿರುವ ನಮ್ಮ ಫ್ಯಾನ್ಸ್​ಗೆ ನಾನು ಕೃತಜ್ಞನಾಗಿರುತ್ತೀನಿ ಎಂದು ಕಿಂಗ್ ಕೊಹ್ಲಿ ಹೇಳಿದ್ದಾರೆ.

3 / 6
ಈ ಬಾರಿ ನಾವು ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಎಂದಿನಂತೆ ಈ ಸಲ ಕೂಡ ನಮ್ಮ ಅಭಿಮಾನಿಗಳ ಬೆಂಬಲ ಅಚಲವಾಗಿತ್ತು. ನಾವು ಸೋತರೂ, ಗೆದ್ದರೂ ಅವರ ಪ್ರೀತಿ ಭಿನ್ನವಾಗಿರಲಿಲ್ಲ. ಇಡೀ ಸೀಸನ್​ನಲ್ಲಿ ಅವರ ಬೆಂಬಲವು ಅಚಲವಾಗಿತ್ತು.

4 / 6
ತವರು ಮೈದಾನದಲ್ಲಿ ಮಾತ್ರವಲ್ಲದೆ ಇತರೆ ಸ್ಟೇಡಿಯಂನಲ್ಲೂ ನೀವು ಅಪಾರ ಸಂಖ್ಯೆಯಲ್ಲಿ ಬೆಂಬಲ ನೀಡಿದ್ದೀರಿ. ನಿಮ್ಮ ಈ ಅಭೂತಪೂರ್ವ ಬೆಂಬಲಕ್ಕಾಗಿ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೀನಿ. ನಿಮ್ಮ ಬೆಂಬಲ ಮತ್ತು ಹಾರೈಕೆಗೆ ತುಂಬಾ ಹೃದಯದ ಧನ್ಯವಾದಗಳು ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

5 / 6
ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 15 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 1 ಶತಕ ಮತ್ತು 5 ಅರ್ಧಶತಕಗಳೊಂದಿಗೆ 741 ರನ್ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅದರಂತೆ ಈ ಸಲ ಆರೆಂಜ್ ಕ್ಯಾಪ್ ಕಿಂಗ್ ಕೊಹ್ಲಿಯ ಪಾಲಾಗುವ ನಿರೀಕ್ಷೆಯಿದೆ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್