AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tilak Varma: 6 ಅರ್ಧಶತಕ… ಆರು ಬಾರಿಯೂ ಮುಂಬೈ ಇಂಡಿಯನ್ಸ್​ಗೆ ಸೋಲು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 43ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 257 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 247 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on: Apr 28, 2024 | 9:28 AM

Share
ಮುಂಬೈ ಇಂಡಿಯನ್ಸ್ ತಂಡದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ (Tilak Varma) ಐಪಿಎಲ್​ನಲ್ಲಿ 6ನೇ ಬಾರಿಗೆ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಈ ಎಲ್ಲೂ ಪಂದ್ಯಗಳಲ್ಲಿ ಒಮ್ಮೆಯೂ ಮುಂಬೈ ಇಂಡಿಯನ್ಸ್ ಜಯ ಸಾಧಿಸಿಲ್ಲ ಎಂಬುದು ಅಚ್ಚರಿ. ಅಂದರೆ ತಿಲಕ್ ವರ್ಮಾ ಅರ್ಧಶತಕ ಸಿಡಿಸಿದ ಎಲ್ಲಾ ಪಂದ್ಯಗಳಲ್ಲೂ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 / 5
ತಿಲಕ್ ವರ್ಮಾ 2022 ಮತ್ತು 2023 ರಲ್ಲಿ ಒಟ್ಟು ಮೂರು ಅರ್ಧಶತಕ ಬಾರಿಸಿದ್ದರು. ಈ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಸೋಲನುಭವಿಸಿತ್ತು. ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಮೂರು ಹಾಫ್ ಸೆಂಚುರಿಗಳನ್ನು ಸಿಡಿಸಿದ್ದಾರೆ. ಈ ಎಲ್ಲಾ ಪಂದ್ಯಗಳಲ್ಲೂ ಹಾರ್ದಿಕ್ ಪಾಂಡ್ಯ ಪಡೆ ಮುಗ್ಗರಿಸಿದೆ.

2 / 5
ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ತಿಲಕ್ ವರ್ಮಾ 64 ರನ್ ಬಾರಿಸಿದ್ದರು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 31 ರನ್​ಗಳಿಂದ ಸೋಲನುಭವಿಸಿತ್ತು. ಇನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ತಿಲಕ್ ವರ್ಮಾ 65 ರನ್ ಬಾರಿಸಿದರೂ ಮುಂಬೈ ತಂಡ 9 ವಿಕೆಟ್​ಗಳಿಂದ ಪರಾಜಯಗೊಂಡಿತ್ತು.

3 / 5
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 63 ರನ್ ಬಾರಿಸಿದರೂ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲುವು ತಂದುಕೊಡಲಾಗಲಿಲ್ಲ. ಇದರೊಂದಿಗೆ ತಿಲಕ್ ವರ್ಮಾ ಅತ್ಯುತ್ತಮ ಪ್ರದರ್ಶನ ನೀಡಿದರೆ ಮುಂಬೈ ಇಂಡಿಯನ್ಸ್​ಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬ ಮಾತುಗಳು ಕೇಳಿ ಬರಲಾರಂಭಿಸಿದೆ.

4 / 5
ಈ ವಿತಂಡ ವಾದಗಳ ನಡುವೆಯೂ ಐಪಿಎಲ್​ನಲ್ಲಿ ಅತ್ಯುತ್ತಮ ಪ್ರದರ್ಶನ ಮುಂದುವರೆಸಿರುವ ತಿಲಕ್ ವರ್ಮಾ, 9 ಇನಿಂಗ್ಸ್​ಗಳಿಂದ ಒಟ್ಟು 336 ರನ್ ಕಲೆಹಾಕಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಗೆಲುವುಗಳಿಗೆ ತನ್ನದೇಯಾದ ಕೊಡುಗೆ ನೀಡಿದ್ದಾರೆ.

5 / 5