IPL 2024: ಐಪಿಎಲ್ನಲ್ಲಿ ಇಂದು 2 ಪಂದ್ಯ: RCB ಮ್ಯಾಚ್ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2024) ಇಂದು ಡಬಲ್ ಹೆಡ್ಡರ್ ಪಂದ್ಯಗಳು ಜರುಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುತ್ತಿದ್ದರೆ, ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕಣಕ್ಕಿಳಿಯಲಿದೆ. ಹೀಗಾಗಿ ಇಂದಿನ ಮ್ಯಾಚ್ಗಳಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.
Updated on: Apr 28, 2024 | 7:47 AM

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2024) ಇಂದು 2 ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ಮುಖಾಮುಖಿಯಾಗಲಿರುವುದು ವಿಶೇಷ.

ಆರ್ಸಿಬಿ ಮತ್ತು ಜಿಟಿ ನಡುವಣ ಪಂದ್ಯವು ಮಧ್ಯಾಹ್ನ 3.30 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಇನ್ನು ರಾತ್ರಿ 7.30 ರಿಂದ ಆರಂಭವಾಗಲಿರುವ 2ನೇ ಪಂದ್ಯದಲ್ಲಿ ಸಿಎಸ್ಕೆ ಮತ್ತು ಎಸ್ಆರ್ಹೆಚ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ.

ಈ ಪಂದ್ಯಗಳು ಎಲ್ಲಾ ನಾಲ್ಕು ತಂಡಗಳಿಗೂ ತುಂಬಾ ಮಹತ್ವದ್ದು. ಏಕೆಂದರೆ ಆರ್ಸಿಬಿ ತಂಡವು ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ, ಗುಜರಾತ್ ಟೈಟಾನ್ಸ್ ವಿರುದ್ಧ ಗೆಲ್ಲಲೇಬೇಕು. ಇನ್ನು ಗುಜರಾತ್ ಟೈಟಾನ್ಸ್ ತಂಡವು ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಿಂದ ಮೇಲೇರಲು ಆರ್ಸಿಬಿ ವಿರುದ್ಧ ಜಯ ಸಾಧಿಸಬೇಕು.

ಹಾಗೆಯೇ ಸಿಎಸ್ಕೆ ತಂಡವು ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ 6ನೇ ಸ್ಥಾನದಲ್ಲಿದ್ದು, ಟಾಪ್-4 ಗೆ ತಲುಪಬೇಕಿದ್ದರೆ ಇಂದು ಎಸ್ಆರ್ಹೆಚ್ ಭರ್ಜರಿ ಜಯ ಸಾಧಿಸಬೇಕು. ಇನ್ನೊಂದೆಡೆ ಕಳೆದ ಪಂದ್ಯದಲ್ಲಿ ಸೋತಿರುವ ಸನ್ರೈಸರ್ಸ್ ಹೈದರಾಬಾದ್ ತಂಡವು ಅಂಕ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಲು ಇಂದಿನ ಪಂದ್ಯದಲ್ಲಿ ವಿಜಯ ಸಾಧಿಸಬೇಕು. ಹೀಗಾಗಿ ಇಂದಿನ ಪಂದ್ಯದಲ್ಲಿ ಎಲ್ಲಾ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

TV9 Kannada
Read More



