IPL 2024: ಐಪಿಎಲ್​ನಲ್ಲಿ ಇಂದು 2 ಪಂದ್ಯ: RCB ಮ್ಯಾಚ್ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

| Updated By: ಝಾಹಿರ್ ಯೂಸುಫ್

Updated on: Apr 28, 2024 | 7:47 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಇಂದು ಡಬಲ್ ಹೆಡ್ಡರ್ ಪಂದ್ಯಗಳು ಜರುಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುತ್ತಿದ್ದರೆ, ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಕಣಕ್ಕಿಳಿಯಲಿದೆ. ಹೀಗಾಗಿ ಇಂದಿನ ಮ್ಯಾಚ್​ಗಳಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

1 / 5
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ಇಂದು 2 ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ಮುಖಾಮುಖಿಯಾಗಲಿರುವುದು ವಿಶೇಷ.

2 / 5
ಆರ್​ಸಿಬಿ ಮತ್ತು ಜಿಟಿ ನಡುವಣ ಪಂದ್ಯವು ಮಧ್ಯಾಹ್ನ 3.30 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

3 / 5
ಇನ್ನು ರಾತ್ರಿ 7.30 ರಿಂದ ಆರಂಭವಾಗಲಿರುವ 2ನೇ ಪಂದ್ಯದಲ್ಲಿ ಸಿಎಸ್​ಕೆ ಮತ್ತು ಎಸ್​ಆರ್​ಹೆಚ್​ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ.

4 / 5
ಈ ಪಂದ್ಯಗಳು ಎಲ್ಲಾ ನಾಲ್ಕು ತಂಡಗಳಿಗೂ ತುಂಬಾ ಮಹತ್ವದ್ದು. ಏಕೆಂದರೆ ಆರ್​ಸಿಬಿ ತಂಡವು ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ, ಗುಜರಾತ್ ಟೈಟಾನ್ಸ್ ವಿರುದ್ಧ ಗೆಲ್ಲಲೇಬೇಕು. ಇನ್ನು ಗುಜರಾತ್ ಟೈಟಾನ್ಸ್ ತಂಡವು ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಿಂದ ಮೇಲೇರಲು ಆರ್​ಸಿಬಿ ವಿರುದ್ಧ ಜಯ ಸಾಧಿಸಬೇಕು.

5 / 5
ಹಾಗೆಯೇ ಸಿಎಸ್​ಕೆ ತಂಡವು ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿ 6ನೇ ಸ್ಥಾನದಲ್ಲಿದ್ದು, ಟಾಪ್-4 ಗೆ ತಲುಪಬೇಕಿದ್ದರೆ ಇಂದು ಎಸ್​ಆರ್​ಹೆಚ್​ ಭರ್ಜರಿ ಜಯ ಸಾಧಿಸಬೇಕು. ಇನ್ನೊಂದೆಡೆ ಕಳೆದ ಪಂದ್ಯದಲ್ಲಿ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ಅಂಕ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಲು ಇಂದಿನ ಪಂದ್ಯದಲ್ಲಿ ವಿಜಯ ಸಾಧಿಸಬೇಕು. ಹೀಗಾಗಿ ಇಂದಿನ ಪಂದ್ಯದಲ್ಲಿ ಎಲ್ಲಾ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.