IPL 2024: ಎಲ್ಲಾ ಊಹಾಪೋಹಗಳಿಗೆ ತೆರೆ: RCB ತಂಡ ಸೇರಿಕೊಂಡ ಸ್ಟಾರ್ ಆಟಗಾರ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್-17 ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಈಗಾಗಲೇ ಆರ್​ಸಿಬಿ ತಂಡದ ಎಲ್ಲಾ ಆಟಗಾರರು ಆಗಮಿಸಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅದರಂತೆ ಮಾರ್ಚ್ 22 ರಂದು ನಡೆಯುವ ಐಪಿಎಲ್​ನ ಮೊದಲ ಪಂದ್ಯದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಮುಖಾಮುಖಿಯಾಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 19, 2024 | 7:02 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ ಟಾಮ್ ಕರನ್ (Tom Curran) ಆಗಮಿಸಿದ್ದಾರೆ. ಅದು ಕೂಡ ಸಂಪೂರ್ಣ ಫಿಟ್​ನೆಸ್​ನೊಂದಿಗೆ. ಇದರೊಂದಿಗೆ ಕರನ್ ಸ್ಥಾನದಲ್ಲಿ ಬೇರೆವರಿಗೆ ಅವಕಾಶ ಸಿಗಲಿದೆ ಎಂಬ ಸುದ್ದಿಗಳಿಗೆ ಬ್ರೇಕ್ ಬಿದ್ದಿದೆ.

1 / 6
ಇದಕ್ಕೂ ಮುನ್ನ ಗಾಯಗೊಂಡಿರುವ ಟಾಮ್ ಕರನ್ ಅವರ ಬದಲಿಗೆ  RCB ತಂಡದಲ್ಲಿ ಜೋಫ್ರಾ ಆರ್ಚರ್ ಅಥವಾ ಬೇರೊಬ್ಬ ಆಟಗಾರ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ತಡವಾಗಿಯಾದರೂ ಕರನ್ ಆರ್​ಸಿಬಿ ಬಳಗವನ್ನು ಕೂಡಿಕೊಂಡಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

2 / 6
ಜನವರಿ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ ಪಂದ್ಯದ ವೇಳೆ ಟಾಮ್ ಕರನ್ ಅವರ ಮೊಣಕಾಲಿಗೆ ಗಾಯವಾಗಿತ್ತು. ಹೀಗಾಗಿ ಅವರು ಈ ಬಾರಿಯ ಐಪಿಎಲ್​ಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ತಿಂಗಳುಗಳ ಅಂತರದಲ್ಲಿ ಫಿಟ್​ನೆಸ್ ಸಾಧಿಸುವಲ್ಲಿ ಯಶಸ್ವಿಯಾಗಿರುವ ಇಂಗ್ಲೆಂಡ್ ಆಲ್​ರೌಂಡರ್ ಐಪಿಎಲ್​ಗೆ ಆಗಮಿಸಿದ್ದಾರೆ.

3 / 6
ಇದರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಟಾಮ್ ಕರನ್ ಆರ್​ಸಿಬಿ ಪರ ಆಡಲಿರುವುದು ಖಚಿತವಾಗಿದೆ. ಹಾಗೆಯೇ ಕರನ್ ಆಗಮನದೊಂದಿಗೆ ಆರ್​ಸಿಬಿ ಬಳಗ ಪೂರ್ಣಗೊಂಡಂತಾಗಿದೆ. ಅದರಂತೆ ಇಂದು (ಮಾ.19) ನಡೆಯಲಿರುವ ಆರ್​ಸಿಬಿ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ತಂಡದ 25 ಆಟಗಾರರು ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ.

4 / 6
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಕಣಕ್ಕಿಳಿಯಲಿದೆ. ಈ ಹೈವೋಲ್ಟೇಜ್ ಪಂದ್ಯದೊಂದಿಗೆ ಐಪಿಎಲ್​ನ 17ನೇ ಆವೃತ್ತಿಗೆ ಚಾಲನೆ ಸಿಗಲಿದೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

6 / 6
Follow us
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ