IPL 2024: ಈ ಆಟಗಾರರಿಗೆ ಇದು ಚೊಚ್ಚಲ ಐಪಿಎಲ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​) ಹೊಸ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ IPL 2024 ಕ್ಕೆ ಚಾಲನೆ ಸಿಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 13, 2024 | 9:54 AM

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಂಗೇರಲು ಇನ್ನು ದಿನಗಳು ಮಾತ್ರ ಉಳಿದಿವೆ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಬಾರಿಯ ಐಪಿಎಲ್​ ಮೂಲಕ ಕೆಲ ಸ್ಟಾರ್ ಆಟಗಾರರು ವಿಶ್ವದ ಶ್ರೀಮಂತ ಲೀಗ್​ಗೆ ಪಾದಾರ್ಪಣೆ ಮಾಡಲಿದ್ದಾರೆ. ಹೀಗೆ ಚೊಚ್ಚಲ ಬಾರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 8
ರಚಿನ್ ರವೀಂದ್ರ: ಚೊಚ್ಚಲ ಬಾರಿ ಐಪಿಎಲ್​ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ನ್ಯೂಝಿಲೆಂಡ್ ಆಟಗಾರ ರಚಿನ್ ರವೀಂದ್ರ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ 1.8 ಕೋಟಿ ರೂ. ನೀಡಿ ಖರೀದಿಸಿದೆ. ಇದೀಗ ಸಿಎಸ್​ಕೆ ತಂಡದ ಭಾಗವಾಗಿರುವ ರಚಿನ್ ಈ ಬಾರಿ ಮೊದಲ ಪಂದ್ಯವಾಡುವ ನಿರೀಕ್ಷೆಯಲ್ಲಿದ್ದಾರೆ.

2 / 8
ನುವಾನ್ ತುಷಾರ: ಜೂನಿಯರ್ ಮಾಲಿಂಗ ಖ್ಯಾತಿಯ ನುವಾನ್ ತುಷಾರ ಈ ಬಾರಿಯ ಐಪಿಎಲ್ ಹರಾಜಿನಲ್ಲಿ 50 ಲಕ್ಷ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 4.8 ಕೋಟಿ ರೂ. ನೀಡಿ ಖರೀದಿಸಿದೆ. ಅದರಂತೆ ಈ ಬಾರಿಯ ಐಪಿಎಲ್ ಮೂಲಕ ಶ್ರೀಲಂಕಾ ವೇಗಿ ಪಾದಾರ್ಪಣೆ ಮಾಡುವ ನಿರೀಕ್ಷೆಯಿದೆ.

3 / 8
ಜೆರಾಲ್ಡ್ ಕೋಟ್ಝಿ: ಸೌತ್ ಆಫ್ರಿಕಾ ವೇಗಿ ಜೆರಾಲ್ಡ್ ಕೋಟ್ಝಿ ಈ ಬಾರಿಯ ಐಪಿಎಲ್​ನಲ್ಲಿ 2 ಕೋಟಿ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಅವರನ್ನು 5 ಕೋಟಿ ರೂ. ನೀಡಿ ಮುಂಬೈ ಇಂಡಿಯನ್ಸ್ ಖರೀದಿಸಿದೆ. ಅದರಂತೆ ಕೋಟ್ಝಿ ಕೂಡ ಐಪಿಎಲ್​ಗೆ ಪಾದಾರ್ಪಣೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ.

4 / 8
ಸಮೀರ್ ರಿಝ್ವಿ: ಉತ್ತರ ಪ್ರದೇಶದ ಯುವ ಆಟಗಾರ ಸಮೀರ್ ರಿಝ್ವಿ 20 ಲಕ್ಷ ರೂ. ಮೂಲಬೆಲೆಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು. ಯುವ ಸ್ಪೋಟಕ ಬ್ಯಾಟರ್​ನ ಖರೀದಿಗೆ ಹಲವು ಫ್ರಾಂಚೈಸಿಗಳು ಆಸಕ್ತಿ ತೋರಿದ್ದವು. ಅಂತಿಮವಾಗಿ 8.4 ಕೋಟಿ ರೂ ನೀಡಿ ಸಿಎಸ್​ಕೆ ತಂಡವು ರಿಝ್ವಿಯನ್ನು ಖರೀದಿಸಿದೆ. ಅದರಂತೆ ಸಮೀರ್ ಕೂಡ ಐಪಿಎಲ್​ಗೆ ಪಾದಾರ್ಪಣೆ ಮಾಡುವುದನ್ನು ಎದುರು ನೋಡುತ್ತಿದ್ದಾರೆ.

5 / 8
ಕುಮಾರ್ ಕುಶಾಗ್ರ: ಈ ಬಾರಿಯ ಐಪಿಎಲ್ ಹರಾಜಿನಲ್ಲಿ 20 ಲಕ್ಷ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಯುವ ವಿಕೆಟ್ ಕೀಪರ್ ಬ್ಯಾಟರ್ ಕುಮಾರ್ ಕುಶಾಗ್ರ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬರೋಬ್ಬರಿ 7.2 ಕೋಟಿ ರೂ. ನೀಡಿ ಖರೀದಿಸಿದೆ. ಅದರಂತೆ ಕುಶಾಗ್ರ ಕೂಡ ಚೊಚ್ಚಲ ಐಪಿಎಲ್ ಪಂದ್ಯವಾಡುವ ನಿರೀಕ್ದೆಯಲ್ಲಿದ್ದಾರೆ.

6 / 8
ದಿಲ್ಶನ್ ಮಧುಶಂಕ: ಈ ಬಾರಿಯ ಹರಾಜಿನಲ್ಲಿ 50 ಲಕ್ಷ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಶ್ರೀಲಂಕಾದ ಎಡಗೈ ವೇಗಿ ದಿಲ್ಶನ್ ಮಧುಶಂಕ ಅವರನ್ನು ಮುಂಬೈ ಇಂಡಿಯನ್ಸ್ 4.6 ಕೋಟಿ ರೂ. ನೀಡಿ ಖರೀದಿಸಿದೆ. ಈ ಮೂಲಕ ಮುಂಬೈ ಪರ ಚೊಚ್ಚಲ ಐಪಿಎಲ್ ಪಂದ್ಯವಾಡುವ​ ನಿರೀಕ್ಷೆಯಲ್ಲಿದ್ದಾರೆ ಮಧುಶಂಕ.

7 / 8
ಶಮರ್ ಜೋಸೆಫ್: ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕೇವಲ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಆದರೆ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಗುಳಿದಿರುವ ಇಂಗ್ಲೆಂಡ್ ವೇಗಿ ಮಾರ್ಕ್​ ವುಡ್ ಅವರ ಬದಲಿ ಆಟಗಾರನಾಗಿ ಶಮರ್ ಜೋಸೆಫ್ LSG ತಂಡಕ್ಕೆ ಆಯ್ಕೆಯಾಗಿದ್ದಾರೆ. ಅದರಂತೆ ಈ ಬಾರಿ ಚೊಚ್ಚಲ ಐಪಿಎಲ್ ಪಂದ್ಯವಾಡುವ ನಿರೀಕ್ಷೆಯಲ್ಲಿದ್ದಾರೆ.

8 / 8
Follow us
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್

ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ