AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಹೆಡ್ ಸಿಡಿಲಬ್ಬರ: ಸುರೇಶ್ ರೈನಾ ದಾಖಲೆ ಜಸ್ಟ್ ಮಿಸ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 35ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 32 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 89 ರನ್ ಬಾರಿಸಿದ್ದರು. ಈ 89 ರನ್​ಗಳ ನಡುವೆ ಹೆಡ್​ ಕೇವಲ 4 ರನ್​ಗಳಿಂದ ಸುರೇಶ್ ರೈನಾ ಅವರ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಮುರಿಯುವ ಅವಕಾಶವನ್ನು ಕೈತಪ್ಪಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 21, 2024 | 10:30 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲಿ ಪವರ್​ಪ್ಲೇನ ಮೊದಲ ಮೂರು ಓವರ್​ಗಳಲ್ಲಿ ಅರ್ಧಶತಕ ಪೂರೈಸಿದ್ದು ಕೇವಲ ಮೂವರು ಬ್ಯಾಟರ್​ಗಳು ಮಾತ್ರ. ಈ ಪಟ್ಟಿಯಲ್ಲಿ ಯಶ್ವಸ್ವಿ ಜೈಸ್ವಾಲ್ (13 ಎಸೆತ) ಅಗ್ರಸ್ಥಾನದಲ್ಲಿದ್ದರೆ, ಕೆಎಲ್ ರಾಹುಲ್ (14 ಎಸೆತ) ದ್ವಿತೀಯ ಸ್ಥಾನದಲ್ಲಿದ್ದಾರೆ. ಇದೀಗ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿರುವ ಟ್ರಾವಿಸ್ ಹೆಡ್ (Travis Head) ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

1 / 5
ಅಷ್ಟೇ ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದಲ್ಲಿ ಪವರ್​ಪ್ಲೇ ಮುಕ್ತಾಯದ ವೇಳೆಗೆ ಟ್ರಾವಿಸ್ ಹೆಡ್ 26 ಎಸೆತಗಳಲ್ಲಿ 84 ರನ್ ಚಚ್ಚಿದ್ದರು. ಇದಾಗ್ಯೂ ಹೆಡ್​ಗೆ ಐಪಿಎಲ್​ನ ಪವರ್​ಪ್ಲೇನ ಸಾರ್ವಕಾಲಿಕ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ.

2 / 5
ಹೌದು, ಐಪಿಎಲ್​ ಇತಿಹಾಸದಲ್ಲಿ ಪವರ್​ಪ್ಲೇನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. 2014 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ಪರ ಅಬ್ಬರಿಸಿದ ರೈನಾ ಕೇವಲ 25 ಎಸೆತಗಳಲ್ಲಿ 87 ರನ್ ಬಾರಿಸಿದ್ದರು.

3 / 5
10 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವ ಅವಕಾಶ ಟ್ರಾವಿಸ್ ಹೆಡ್ ಮುಂದಿತ್ತು. ಆದರೆ ಪವರ್​ಪ್ಲೇನ ಕೊನೆಯ ಓವರ್​ನ 5ನೇ ಎಸೆತದಲ್ಲಿ ಯಾವುದೇ ರನ್ ಗಳಿಸದೇ ಟ್ರಾವಿಸ್ ಹೆಡ್ ಈ ಅವಕಾಶವನ್ನು ಕೈ ಚೆಲ್ಲಿಕೊಂಡರು.

4 / 5
ಇದಾಗ್ಯೂ ಐಪಿಎಲ್​ನಲ್ಲಿ ಮೊದಲ 6 ಓವರ್​ಗಳಲ್ಲಿ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಹಾಗೂ 2ನೇ ಆಟಗಾರ ಎಂಬ ದಾಖಲೆ ಟ್ರಾವಿಸ್ ಹೆಡ್ ಪಾಲಾಗಿದೆ. ಈ ದಾಖಲೆಗಳ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಹೆಡ್ ತಮ್ಮ ಮಾಸ್ಟರ್ ಸ್ಟ್ರೋಕ್ ಮುಂದುವರೆಸಿದ್ದಾರೆ.

5 / 5
Follow us
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’

ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ

ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ

ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ

ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ

ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​

ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ

ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ

ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?

ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ