IPL 2024: ಹೆಡ್ ಸಿಡಿಲಬ್ಬರ: ಸುರೇಶ್ ರೈನಾ ದಾಖಲೆ ಜಸ್ಟ್ ಮಿಸ್..!
TV9 Web | Updated By: ಝಾಹಿರ್ ಯೂಸುಫ್
Updated on:
Apr 21, 2024 | 10:30 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 35ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 32 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 89 ರನ್ ಬಾರಿಸಿದ್ದರು. ಈ 89 ರನ್ಗಳ ನಡುವೆ ಹೆಡ್ ಕೇವಲ 4 ರನ್ಗಳಿಂದ ಸುರೇಶ್ ರೈನಾ ಅವರ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಮುರಿಯುವ ಅವಕಾಶವನ್ನು ಕೈತಪ್ಪಿಸಿಕೊಂಡಿದ್ದಾರೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲಿ ಪವರ್ಪ್ಲೇನ ಮೊದಲ ಮೂರು ಓವರ್ಗಳಲ್ಲಿ ಅರ್ಧಶತಕ ಪೂರೈಸಿದ್ದು ಕೇವಲ ಮೂವರು ಬ್ಯಾಟರ್ಗಳು ಮಾತ್ರ. ಈ ಪಟ್ಟಿಯಲ್ಲಿ ಯಶ್ವಸ್ವಿ ಜೈಸ್ವಾಲ್ (13 ಎಸೆತ) ಅಗ್ರಸ್ಥಾನದಲ್ಲಿದ್ದರೆ, ಕೆಎಲ್ ರಾಹುಲ್ (14 ಎಸೆತ) ದ್ವಿತೀಯ ಸ್ಥಾನದಲ್ಲಿದ್ದಾರೆ. ಇದೀಗ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿರುವ ಟ್ರಾವಿಸ್ ಹೆಡ್ (Travis Head) ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
2 / 5
ಅಷ್ಟೇ ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪವರ್ಪ್ಲೇ ಮುಕ್ತಾಯದ ವೇಳೆಗೆ ಟ್ರಾವಿಸ್ ಹೆಡ್ 26 ಎಸೆತಗಳಲ್ಲಿ 84 ರನ್ ಚಚ್ಚಿದ್ದರು. ಇದಾಗ್ಯೂ ಹೆಡ್ಗೆ ಐಪಿಎಲ್ನ ಪವರ್ಪ್ಲೇನ ಸಾರ್ವಕಾಲಿಕ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ.
3 / 5
ಹೌದು, ಐಪಿಎಲ್ ಇತಿಹಾಸದಲ್ಲಿ ಪವರ್ಪ್ಲೇನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. 2014 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್ಕೆ ಪರ ಅಬ್ಬರಿಸಿದ ರೈನಾ ಕೇವಲ 25 ಎಸೆತಗಳಲ್ಲಿ 87 ರನ್ ಬಾರಿಸಿದ್ದರು.
4 / 5
10 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವ ಅವಕಾಶ ಟ್ರಾವಿಸ್ ಹೆಡ್ ಮುಂದಿತ್ತು. ಆದರೆ ಪವರ್ಪ್ಲೇನ ಕೊನೆಯ ಓವರ್ನ 5ನೇ ಎಸೆತದಲ್ಲಿ ಯಾವುದೇ ರನ್ ಗಳಿಸದೇ ಟ್ರಾವಿಸ್ ಹೆಡ್ ಈ ಅವಕಾಶವನ್ನು ಕೈ ಚೆಲ್ಲಿಕೊಂಡರು.
5 / 5
ಇದಾಗ್ಯೂ ಐಪಿಎಲ್ನಲ್ಲಿ ಮೊದಲ 6 ಓವರ್ಗಳಲ್ಲಿ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಹಾಗೂ 2ನೇ ಆಟಗಾರ ಎಂಬ ದಾಖಲೆ ಟ್ರಾವಿಸ್ ಹೆಡ್ ಪಾಲಾಗಿದೆ. ಈ ದಾಖಲೆಗಳ ಮೂಲಕ ಈ ಬಾರಿಯ ಐಪಿಎಲ್ನಲ್ಲಿ ಹೆಡ್ ತಮ್ಮ ಮಾಸ್ಟರ್ ಸ್ಟ್ರೋಕ್ ಮುಂದುವರೆಸಿದ್ದಾರೆ.