Travis Head: ಟ್ರಾವಿಸ್ ಹೆಡ್ ‘ಮಾಸ್ಟರ್ ಸ್ಟ್ರೋಕ್’: ಇದು ದಶಕದ ಸ್ಪೋಟಕ ಸೆಂಚುರಿ
TV9 Web | Updated By: ಝಾಹಿರ್ ಯೂಸುಫ್
Updated on:
Apr 16, 2024 | 2:57 PM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಶತಕ ಸಿಡಿಸುವ ಮೂಲಕ ಸನ್ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳ ನಡುವೆ ಐಪಿಎಲ್ನಲ್ಲಿ 40 ಎಸೆತಗಳಿಗಿಂತ ಕಡಿಮೆ ಬಾಲ್ನಲ್ಲಿ ಶತಕ ಬಾರಿಸಿ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
1 / 5
IPL 2024: ಕೇವಲ 39 ಎಸೆತಗಳು... 8 ಭರ್ಜರಿ ಸಿಕ್ಸ್... 9 ಫೋರ್ಗಳು... ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಟ್ರಾವಿಡ್ ಹೆಡ್ (Travis Head) ಸ್ಪೋಟಕ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಆರ್ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಹೆಡ್ ವಿಸ್ಪೋಟಕ ಬ್ಯಾಟಿಂಗ್ನೊಂದಿಗೆ ಅಬ್ಬರಿಸಿದರು.
2 / 5
ಈ ಮೂಲಕ ಕೇವಲ 39 ಎಸೆತಗಳಲ್ಲಿ ಶತಕ ಪೂರೈಸಿ ಸನ್ರೈಸರ್ಸ್ ಹೈದರಾಬಾದ್ ಪರ ಅತೀ ವೇಗದ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡರು. ವಿಶೇಷ ಎಂದರೆ ಇದು ಐಪಿಎಲ್ನಲ್ಲಿ ಕಳೆದ ಒಂದು ದಶಕದಲ್ಲಿ ಮೂಡಿಬಂದ ವಿಸ್ಪೋಟಕ ಸೆಂಚುರಿ.
3 / 5
ಅಂದರೆ ಐಪಿಎಲ್ನಲ್ಲಿ 40 ಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕ ಮೂಡಿಬಂದು 10 ವರ್ಷಗಳೇ ಕಳೆದಿವೆ. ಕೊನೆಯ ಬಾರಿ ಅತೀ ಕಡಿಮೆ ಎಸೆತಗಳಲ್ಲಿ ಶತಕ ಮೂಡಿಬಂದಿದ್ದು 2013 ರಲ್ಲಿ. ಅಂದು ಗೇಲ್ 30 ಎಸೆತಗಳಲ್ಲಿ ಶತಕ ಸಿಡಿಸಿದರೆ, ಮತ್ತೊಂದು ಪಂದ್ಯದಲ್ಲಿ ಡೇವಿಡ್ ಮಿಲ್ಲರ್ 37 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದಾದ ಬಳಿಕ ಯಾವುದೇ ಬ್ಯಾಟರ್ 40 ಕ್ಕಿಂತ ಕಡಿಮೆ ಎಸೆತಗಳಲ್ಲಿ ಸೆಂಚುರಿ ಸಿಡಿಸಲು ಸಾಧ್ಯವಾಗಿರಲಿಲ್ಲ.
4 / 5
ಇದೀಗ ಬರೋಬ್ಬರಿ 11 ವರ್ಷಗಳ ಬಳಿಕ ಟ್ರಾವಿಸ್ ಹೆಡ್ ಅತೀ ವೇಗದ ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 40 ಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
5 / 5
ಇದಕ್ಕೂ ಮುನ್ನ ಕ್ರಿಸ್ ಗೇಲ್ (30 ಎಸೆತ), ಯೂಸುಫ್ ಪಠಾಣ್ (37), ಡೇವಿಡ್ ಮಿಲ್ಲರ್ (38) ಮಾತ್ರ 40 ಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದೀಗ ಬರೋಬ್ಬರಿ ಹನ್ನೊಂದು ವರ್ಷಗಳ ಟ್ರಾವಿಡ್ ಹೆಡ್ ಐಪಿಎಲ್ನಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.
Published On - 2:55 pm, Tue, 16 April 24