IPL 2024: ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಉಮೇಶ್ ಯಾದವ್

| Updated By: ಝಾಹಿರ್ ಯೂಸುಫ್

Updated on: Apr 06, 2024 | 7:26 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಹಿರಿಯ ವೇಗಿ ಉಮೇಶ್ ಯಾದವ್ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಅದು ಸಹ ತಂಡವೊಂದರ ವಿರುದ್ಧ ಅತ್ಯಧಿಕ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಉಮೇಶ್ ಯಾದವ್ ಹೆಸರಿಗೆ ಸೇರ್ಪಡೆಯಾಗಿರುವ ಹೊಸ ದಾಖಲೆ ಯಾವುದೆಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17ರ 17ನೇ ಪಂದ್ಯದಲ್ಲಿ ಒಂದು ವಿಕೆಟ್ ಕಬಳಿಸುವ ಮೂಲಕ ಉಮೇಶ್ ಯಾದವ್ (Umesh Yadav) ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದ ಉಮೇಶ್ 3 ಓವರ್​ಗಳಲ್ಲಿ 35 ರನ್ ನೀಡಿ 1 ವಿಕೆಟ್ ಪಡೆದಿದ್ದರು.

2 / 5
ಈ ವಿಕೆಟ್​ನೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಒಂದೇ ತಂಡದ ಪರ ಅತ್ಯಧಿಕ ವಿಕೆಟ್ ಪಡೆದ ವಿಶೇಷ ದಾಖಲೆಯೊಂದು ಉಮೇಶ್ ಯಾದವ್ ಪಾಲಾಯಿತು. ಇದಕ್ಕೂ ಮುನ್ನ ಇಂತಹದೊಂದು ದಾಖಲೆ ಡ್ವೇನ್ ಬ್ರಾವೊ ಹೆಸರಿನಲ್ಲಿತ್ತು.

3 / 5
ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಲಯನ್ಸ್ ಪರ ಆಡಿದ್ದ ಡ್ವೇನ್ ಬ್ರಾವೊ 158 ಇನಿಂಗ್ಸ್​​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಒಟ್ಟು 33 ವಿಕೆಟ್​ಗಳನ್ನು ಕಬಳಿಸಿ ಈ ದಾಖಲೆ ಬರೆದಿದ್ದರು.

4 / 5
ಆರ್​ಸಿಬಿ, ಕೆಕೆಆರ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದಿರುವ ಉಮೇಶ್ ಯಾದವ್ 144 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಪಂಜಾಬ್ ಕಿಂಗ್ಸ್ ವಿರುದ್ಧ ಒಟ್ಟು 34 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

5 / 5
ಇನ್ನು ಐಪಿಎಲ್​ನಲ್ಲಿ ಇದುವರೆಗೆ 145 ಪಂದ್ಯಗಳನ್ನಾಡಿರುವ ಉಮೇಶ್ ಯಾದವ್ ಒಟ್ಟು 2990 ಎಸೆತಗಳನ್ನು ಎಸೆದಿದ್ದು, ಈ ವೇಳೆ 4228 ರನ್​ಗಳನ್ನು ನೀಡಿ 140 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಐಪಿಎಲ್​ ವಿಕೆಟ್ ಸರದಾರರ ಪಟ್ಟಿಯಲ್ಲಿ 13ನೇ ಸ್ಥಾನ ಅಲಂಕರಿಸಿದ್ದಾರೆ.

Published On - 7:23 am, Sat, 6 April 24