AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Mallya: ಅಭಿನಂದನೆಯೊಂದಿಗೆ RCB ಗೆ ಸ್ಪಷ್ಟ ಸಂದೇಶ ನೀಡಿದ ವಿಜಯ ಮಲ್ಯ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದೆ. ಐಪಿಎಲ್​ 2024 ರ ಮೊದಲಾರ್ಧದ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದ್ದು, ಉಳಿದ ಮ್ಯಾಚ್​ಗಳ ದಿನಾಂಕಗಳನ್ನು ಶೀಘ್ರದಲ್ಲೇ ಘೋಷಿಸುವುದಾಗಿ ಬಿಸಿಸಿಐ ತಿಳಿಸಿದೆ. ಅದರಂತೆ ಮೊದಲ ಸುತ್ತಿನಲ್ಲಿ 21 ಐಪಿಎಲ್ ಪಂದ್ಯಗಳು ನಡೆಯಲಿದೆ.

TV9 Web
| Edited By: |

Updated on: Mar 18, 2024 | 10:05 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೊನೆಗೂ ರಾಯಲ್ಲಾಗಿಯೇ ಟ್ರೋಫಿ ಗೆದ್ದುಕೊಂಡಿದೆ. ದೆಹಲಿಯಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಆರ್​ಸಿಬಿ ಫ್ರಾಂಚೈಸಿಯ 16 ವರ್ಷಗಳ ಕನಸನ್ನು ರಾಯಲ್ ಚಾಲೆಂಜರ್ಸ್​ ವುಮೆನ್ ಟೀಮ್ ಈಡೇರಿಸಿದೆ.

1 / 6
ಈ ಗೆಲುವಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಮಾಲೀಕರಾದ ವಿಜಯ ಮಲ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ. WPL ಗೆದ್ದ RCB ಮಹಿಳಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. RCB ಪುರುಷರ ತಂಡ ಐಪಿಎಲ್ ಗೆದ್ದರೆ ಈ ಖುಷಿ ಡಬಲ್ ಆಗಲಿದೆ. ಒಳ್ಳೆಯದಾಗಲಿ ಎಂದು ಮಲ್ಯ ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

2 / 6
ಈ ಮೂಲಕ ಐಪಿಎಲ್ ಸೀಸನ್ 17 ರಲ್ಲಿ ಕಣಕ್ಕಿಳಿಯಲಿರುವ ಸಜ್ಜಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ವಿಜಯ ಮಲ್ಯ ಕಪ್ ಗೆದ್ದು, ಆರ್​ಸಿಬಿ ಅಭಿಮಾನಿಗಳ ಸಂಭ್ರಮವನ್ನು ಇಮ್ಮಡಿಗೊಳಿಸುವಂತೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

3 / 6
ಅಂದಹಾಗೆ ವಿಜಯ್ ಮಲ್ಯ ಆರ್​ಸಿಬಿ ತಂಡದ ಸಂಸ್ಥಾಪಕರು. 2008 ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ತಂಡಗಳ ಬಿಡ್ಡಿಂಗ್​ನಲ್ಲಿ ಮಲ್ಯ ಅವರು ಆರ್​ಸಿಬಿ ತಂಡವನ್ನು 455 ಕೋಟಿ ರೂ. ನೀಡಿ ಖರೀದಿಸಿದ್ದರು.

4 / 6
ಆದರೆ 2016 ರಲ್ಲಿ ಆರ್ಥಿಕ ಮುಗ್ಗಟ್ಟು ಎದುರಿಸಿ ಸಾಲದ ಸುಳಿಗೆ ಸಿಲುಕಿದ ವಿಜಯ ಮಲ್ಯ ಭಾರತದಿಂದ ಪಾಲಾಯನ ಮಾಡಿ, ಈಗ  ಇಂಗ್ಲೆಂಡ್​ನಲ್ಲಿ ನೆಲೆಸಿದ್ದಾರೆ. ಇದೀಗ ಆರ್​ಸಿಬಿ ತಂಡದ ಮಾಲೀಕತ್ವವು ಯುನೈಟೆಡ್ ಸ್ಪಿರಿಟ್ಸ್ ಕಂಪೆನಿಯ ಹೆಸರಿನಲ್ಲಿದ್ದರೂ, ತಂಡದ ಮಾಲಕತ್ವದ ಶೇ. 54.8 ರಷ್ಟು ಭಾಗ ಡಿಯಾಜಿಯೊ ಕಂಪೆನಿಯ ಅಧೀನದಲ್ಲಿದೆ.

5 / 6
ಐಪಿಎಲ್ ಯಾವಾಗ ಶುರು?: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್​ನ 17ನೇ ಆವೃತ್ತಿ ಆರಂಭವಾಗಲಿದೆ.

6 / 6