AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕನ್ನಡಿಗನನ್ನು ಕೈಬಿಟ್ಟು ಕೆಟ್ಟ RCB

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್​ 2024) ಆರ್​ಸಿಬಿ ಫ್ರಾಂಚೈಸಿ ಕನ್ನಡಿಗರನ್ನು ಕಡೆಗಣಿಸುತ್ತಾರೆಂಬ ಮಾತುಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಅತ್ಯುತ್ತಮ ಪ್ರದರ್ಶನ ನೀಡಿದರೂ ಕರ್ನಾಟಕದ ಆಟಗಾರ ವಿಜಯಕುಮಾರ್ ವೈಶಾಕ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ನೀಡದಿರುವ ಬಗ್ಗೆ ಪ್ರಶ್ನೆಗಳೆದ್ದಿವೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 03, 2024 | 8:30 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಆಡಿದ 4 ಪಂದ್ಯಗಳಲ್ಲಿ ಮೂರರಲ್ಲಿ ಸೋತಿದೆ. ಸಿಎಸ್​ಕೆ ವಿರುದ್ದದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಆರ್​ಸಿಬಿ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿತ್ತು. ಇದಾದ ಬಳಿಕ ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಗ್ಗರಿಸಿದೆ.

1 / 6
ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್​ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತವರು ಮೈದಾನದಲ್ಲಿ ಮುಗ್ಗರಿಸುವ ಮೂಲಕ ಆರ್​ಸಿಬಿ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಇದರ ನಡುವೆ ಆರ್​ಸಿಬಿ ತಂಡದ ಸ್ಟ್ರಾಟಜಿ ಬಗ್ಗೆ ಕೂಡ ಭಾರೀ ಟೀಕೆಗಳು ಕೇಳಿ ಬರುತ್ತಿದೆ. ಇದಕ್ಕೆ ಮುಖ್ಯ ಕಾರಣ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಕನ್ನಡಿಗ ವಿಜಯಕುಮಾರ್ ವೈಶಾಕ್ ಅವರನ್ನು ಕೈಬಿಟ್ಟಿರುವುದು.

2 / 6
ಬೆಂಗಳೂರಿನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿಜಯಕುಮಾರ್ ವೈಶಾಕ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಪಂದ್ಯದಲ್ಲಿ ಆರ್​ಸಿಬಿ ಬೌಲರ್​ಗಳು ದುಬಾರಿಯಾಗಿದ್ದರೂ, ಒಂದೆಡೆ ವೈಶಾಕ್ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ಅಲ್ಲದೆ 4 ಓವರ್​ಗಳಲ್ಲಿ ಕೇವಲ 23 ರನ್ ನೀಡಿ 1 ವಿಕೆಟ್ ಕಬಳಿಸಿ ಮಿಂಚಿದ್ದರು.

3 / 6
ಇಂತಹ ಅತ್ಯುತ್ತಮ ಪ್ರದರ್ಶನ ನೀಡಿದರೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವಿಜಯಕುಮಾರ್ ವೈಶಾಕ್ ಅವರನ್ನು ಆರ್​ಸಿಬಿ ಕಣಕ್ಕಿಳಿಸಿರಲಿಲ್ಲ. ಮತ್ತೊಮ್ಮೆ ಅದೇ ಮಯಾಂಕ್ ಡಾಗರ್ ಅವರಿಗೆ ಚಾನ್ಸ್ ನೀಡಿದ್ದರು.

4 / 6
ಇದೀಗ ತವರು ಮೈದಾನದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರೂ ವಿಜಯಕುಮಾರ್ ವೈಶಾಕ್ ಅವರನ್ನು ಕೈ ಬಿಡಲು ಕಾರಣವೇನು? ಎಂದು ಪ್ರಶ್ನಿಸಿದ್ದಾರೆ ಮಾಜಿ ಆಟಗಾರ ರಾಬಿನ್ ಉತ್ತಪ್ಪ. ಕಳೆದ ಪಂದ್ಯದಲ್ಲಿ ಮಿಂಚಿನ ದಾಳಿ ಸಂಘಟಿಸಿದ ವೈಶಾಕ್​ಗೆ ಅವಕಾಶ ನೀಡದಿರುವ ಆರ್​ಸಿಬಿ ಮ್ಯಾನೇಜ್ಮೆಂಟ್ ನಡೆಯ ಬಗ್ಗೆ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ.

5 / 6
ಒಟ್ಟಿನಲ್ಲಿ ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿದ್ದ ಕೆಕೆಆರ್ ವಿರುದ್ಧವೇ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಕನ್ನಡಿಗನನ್ನು ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಿಂದ ಕೈ ಬಿಟ್ಟು ಇದೀಗ ಆರ್​ಸಿಬಿ ತಂಡವು ಪರಿತಪಿಸುವಂತಾಗಿದೆ. ಅದು ಕೂಡ ಬ್ಯಾಕ್ ಟು ಬ್ಯಾಕ್ ಸೋಲಿನೊಂದಿಗೆ ಎಂಬುದು ವಿಶೇಷ.

6 / 6