ಈ ಹಿಂದೆ ಟಿ20 ವಿಶ್ವಕಪ್ನಿಂದ ಹೊರಗುಳಿಯುವಂತೆ ವಿರಾಟ್ ಕೊಹ್ಲಿಯನ್ನು ಮನವೊಲಿಸಬೇಕೆಂದು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೂಚಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಜವಾಬ್ದಾರಿಯಿಂದ ಅಗರ್ಕರ್ ಹಿಂದೆ ಸರಿದಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ಅವರಲ್ಲಿ ಜಯ್ ಶಾ ಈ ವಿಚಾರವನ್ನು ಪ್ರಸ್ತಾಪಿಸಿದ್ದರು ಎಂದು ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಬಹಿರಂಗಪಡಿಸಿದ್ದರು.