Virat Kohli: ಟಿ20 ವಿಶ್ವಕಪ್​ನಲ್ಲಿ ಕಿಂಗ್ ಕೊಹ್ಲಿ ಕಣಕ್ಕಿಳಿಯುವುದು ಕನ್ಫರ್ಮ್​

| Updated By: ಝಾಹಿರ್ ಯೂಸುಫ್

Updated on: Apr 09, 2024 | 5:30 PM

IPL 2024: ಐಪಿಎಲ್ ಸೀಸನ್ 17 ರಲ್ಲಿ ವಿರಾಟ್ ಕೊಹ್ಲಿ ಇದುವರೆಗೆ 5 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 216 ಎಸೆತಗಳನ್ನು ಎದುರಿಸಿ 316 ರನ್​ ಕಲೆಹಾಕಿದ್ದಾರೆ. ಇದರ ನಡುವೆ 1 ಭರ್ಜರಿ ಶತಕ ಹಾಗೂ 2 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ IPL 2024 ರ ಟಾಪ್ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

1 / 6
ಐಪಿಎಲ್ (IPL 2024) ಸೀಸನ್ 17 ರಲ್ಲಿ ಟಾಪ್ ರನ್​ ಸ್ಕೋರರ್​ ಆಗಿ ಮಿಂಚುತ್ತಿರುವ ವಿರಾಟ್ ಕೊಹ್ಲಿ (Virat Kohli) ಮುಂಬರುವ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಉತ್ತಮ ಫಾರ್ಮ್​​ನಲ್ಲಿರುವ ಕೊಹ್ಲಿಯನ್ನು ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ.

2 / 6
ಈ ಹಿಂದೆ ಟಿ20 ವಿಶ್ವಕಪ್​ನಿಂದ ಹೊರಗುಳಿಯುವಂತೆ ವಿರಾಟ್ ಕೊಹ್ಲಿಯನ್ನು ಮನವೊಲಿಸಬೇಕೆಂದು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೂಚಿಸಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಜವಾಬ್ದಾರಿಯಿಂದ ಅಗರ್ಕರ್ ಹಿಂದೆ ಸರಿದಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ಅವರಲ್ಲಿ ಜಯ್ ಶಾ ಈ ವಿಚಾರವನ್ನು ಪ್ರಸ್ತಾಪಿಸಿದ್ದರು ಎಂದು ಮಾಜಿ ಕ್ರಿಕೆಟಿಗ ಕೀರ್ತಿ ಆಝಾದ್ ಬಹಿರಂಗಪಡಿಸಿದ್ದರು.

3 / 6
ಆದರೆ ವಿರಾಟ್ ಕೊಹ್ಲಿ ತಂಡದಲ್ಲಿ ಇರಲೇಬೇಕೆಂದು ರೋಹಿತ್ ಶರ್ಮಾ ಬಿಸಿಸಿಐ ಕಾರ್ಯದರ್ಶಿಗೆ ಖಂಡತುಂಡವಾಗಿ ಹೇಳಿದ್ದಾರೆಂದು ಕೀರ್ತಿ ಆಝಾದ್ ತಿಳಿಸಿದ್ದರು. ಇದಾಗ್ಯೂ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಪ್ರದರ್ಶನದ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕಣ್ಣಿಟ್ಟಿದ್ದರು.

4 / 6
ಆದರೀಗ ಕೇವಲ 5 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ 316 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನುಳಿದ ಪಂದ್ಯಗಳಲ್ಲೂ ಕೊಹ್ಲಿ ಕಡೆಯಿಂದ ಉತ್ತಮ ಬ್ಯಾಟಿಂಗ್ ಅನ್ನು ನಿರೀಕ್ಷಿಸಬಹುದು.

5 / 6
ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೆ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಲೇಬೇಕಾದ ಅನಿವಾರ್ಯತೆ ಬಿಸಿಸಿಐ ಎದುರಾಗಿದೆ. ಏಕೆಂದರೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಕೊಹ್ಲಿಯನ್ನು ಯಾವುದೇ ಕಾರಣದಿಂದಲೂ ತಂಡದಿಂದ ಕೈ ಬಿಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅವರು ಟಿ20 ವಿಶ್ವಕಪ್​ಗೆ ಆಯ್ಕೆಯಾಗುವುದು ಖಚಿತ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ ಎಂದು ಕ್ರಿಕ್ ಬಝ್ ವರದಿ ಮಾಡಿದೆ.

6 / 6
ಅದರಂತೆ ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಆಯ್ಕೆ ಮಾಡಲಾಗುವ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು. ಅಲ್ಲದೆ ಇದು ಕಿಂಗ್ ಕೊಹ್ಲಿಯ ಕೊನೆಯ ಟಿ20 ವಿಶ್ವಕಪ್ ಆಗಿರಲಿದೆ. ಈ ಮೂಲಕ ಕೊಹ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.