Virat Kohli: ಮತ್ತೊಂದು ಮೈಲುಗಲ್ಲು ದಾಟಿದ ವಿರಾಟ್ ಕೊಹ್ಲಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 15ನೇ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 181 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 19.4 ಓವರ್​ಗಳಲ್ಲಿ 153 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಎಲ್​ಎಸ್​ಜಿ ತಂಡವು 28 ರನ್​​ಗಳ ಗೆಲುವು ದಾಖಲಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 03, 2024 | 7:22 AM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 15ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ವಿಶೇಷ ಮೈಲುಗಲ್ಲನ್ನು ದಾಟಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಆರ್​ಸಿಬಿಗೆ 182 ರನ್​ಗಳ ಗುರಿ ನೀಡಿತ್ತು.

1 / 6
ಈ ಗುರಿಯನ್ನು ಬೆನ್ನತ್ತಲು ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 16 ಎಸೆತಗಳಲ್ಲಿ 2 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 22 ರನ್ ಬಾರಿಸಿ ಔಟಾಗಿದ್ದರು. ಇದಾಗ್ಯೂ ಈ ಮೂರು ಬೌಂಡರಿಗಳೊಂದಿಗೆ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದರು.

2 / 6
ಈ ಪಂದ್ಯದಲ್ಲಿ ಬಾರಿಸಿದ 2 ಫೋರ್ ಹಾಗೂ 1 ಸಿಕ್ಸ್​​ನೊಂದಿಗೆ ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 900+ ಬೌಂಡರಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು. ಅಲ್ಲದೆ ಒಂದೇ ತಂಡದ ಪರ ಅತ್ಯಧಿಕ ಬೌಂಡರಿ ಬಾರಿಸಿದ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಬರೆದರು.

3 / 6
ಕೊಹ್ಲಿಗೂ ಮುನ್ನ ಶಿಖರ್ ಧವನ್ ಈ ಸಾಧನೆ ಮಾಡಿದ್ದಾರೆ. ಐಪಿಎಲ್​ನಲ್ಲಿ 219 ಪಂದ್ಯಗಳನ್ನಾಡಿರುವ ಧವನ್ 766 ಫೋರ್ ಹಾಗೂ 152 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಒಟ್ಟು 918 ಬೌಂಡರಿಗಳೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಅತೀ ಹೆಚ್ಚು ಬೌಂಡರಿ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 6
ಇದೀಗ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಐಪಿಎಲ್​ನಲ್ಲಿ 233 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 660 ಫೋರ್ ಹಾಗೂ 242 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 902 ಬೌಂಡರಿ ಬಾರಿಸಿ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಹಾಗೆಯೇ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 100 ಟಿ20 ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ವಿರಾಟ್ ಕೊಹ್ಲಿ ಬರೆದಿದ್ದಾರೆ. ಇದರೊಂದಿಗೆ ಒಂದೇ ಮೈದಾನದಲ್ಲಿ 100 ಟಿ20 ಪಂದ್ಯಗಳನ್ನಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

6 / 6
Follow us