Virat Kohli: ಐಪಿಎಲ್ನಲ್ಲಿ ಹೊಸ ಇತಿಹಾಸ ಬರೆದ ಕಿಂಗ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Apr 07, 2024 | 8:30 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ವಿರಾಟ್ ಕೊಹ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದಾರೆ. ಒಂದೆಡೆ ರನ್ಗಳನ್ನು ಕಲೆಹಾಕುತ್ತಾ ದಾಖಲೆ ಬರೆದರೆ, ಮತ್ತೊಂದೆಡೆ ಫೀಲ್ಡಿಂಗ್ ಮೂಲಕ ಭರ್ಜರಿ ರೆಕಾರ್ಡ್ ನಿರ್ಮಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದ ಬೆಸ್ಟ್ ಫೀಲ್ಡರ್ ಎನಿಸಿಕೊಂಡಿದ್ದಾರೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 19ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಸಹ ಫೀಲ್ಡಿಂಗ್ ಮೂಲಕ ಎಂಬುದು ವಿಶೇಷ. ಅಂದರೆ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಫೀಲ್ಡರ್ ಎಂಬ ದಾಖಲೆ ಇದೀಗ ಕಿಂಗ್ ಕೊಹ್ಲಿ ಪಾಲಾಗಿದೆ.
2 / 5
ಶನಿವಾರ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ರಿಯಾನ್ ಪರಾಗ್ ಅವರ ಕ್ಯಾಚ್ ಹಿಡಿದಿದ್ದರು. ಈ ಕ್ಯಾಚ್ನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ ಎಂಬ ದಾಖಲೆ ಕಿಂಗ್ ಕೊಹ್ಲಿ ಪಾಲಾಯಿತು.
3 / 5
ಇದಕ್ಕೂ ಮುನ್ನ ಈ ದಾಖಲೆ ಸುರೇಶ್ ರೈನಾ ಅವರ ಹೆಸರಿನಲ್ಲಿತ್ತು. 205 ಐಪಿಎಲ್ ಪಂದ್ಯಗಳಲ್ಲಿ ಫೀಲ್ಡಿಂಗ್ ಮಾಡಿರುವ ರೈನಾ ಒಟ್ಟು 109 ಕ್ಯಾಚ್ಗಳನ್ನು ಹಿಡಿದು ದಾಖಲೆ ನಿರ್ಮಿಸಿದ್ದರು.
4 / 5
ಇದೀಗ 242 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ ಒಟ್ಟು 110 ಕ್ಯಾಚ್ಗಳನ್ನು ಹಿಡಿದಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ ಎನಿಸಿಕೊಂಡಿದ್ದಾರೆ.
5 / 5
ಹಾಗೆಯೇ ಈ ಪಂದ್ಯದಲ್ಲಿ ವಿರಾಟ್ ಸೆಂಚುರಿ ಸಿಡಿಸಿ ಮಿಂಚಿದ್ದರು. ಈ ಮೂಲಕ ಐಪಿಎಲ್ನಲ್ಲಿ 8 ಶತಕಗಳನ್ನು ಬಾರಿಸಿದ ಏಕೈಕ ಬ್ಯಾಟರ್ ಎಂಬ ದಾಖಲೆಯೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಅಲ್ಲದೆ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ವಿಶ್ವದ ಮೂರನೇ ಬ್ಯಾಟ್ಸ್ಮನ್ ಎಂಬ ರೆಕಾರ್ಡ್ ಅನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.