AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB ಸೋತರೂ, 3 ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ದಾಖಲೆಗಳ ನಾಗಾಲೋಟ ಮುಂದುವರೆದಿದೆ. ಶುಕ್ರವಾರ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋತರೆ, ಕಿಂಗ್ ಕೊಹ್ಲಿ ಐಪಿಎಲ್​ನಲ್ಲಿ ಮೂರು ವಿಶೇಷ ದಾಖಲೆಗಳನ್ನು ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: Mar 30, 2024 | 10:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 10ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಮೂರು ಭರ್ಜರಿ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ ಜಬರ್​ದಸ್ತ್ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 6
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಕೊಹ್ಲಿ 39 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅಲ್ಲದೆ 59 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ 4 ಫೋರ್​ಗಳೊಂದಿಗೆ ಅಜೇಯ 83 ರನ್ ಬಾರಿಸಿದರು. ಈ ಭರ್ಜರಿ ಇನಿಂಗ್ಸ್​ನೊಂದಿಗೆ ಕೊಹ್ಲಿ 2 ದಾಖಲೆಗಳನ್ನು ಬರೆದರು.

2 / 6
ಈ ಪಂದ್ಯದಲ್ಲಿ 4 ಸಿಕ್ಸ್ ಸಿಡಿಸುವುದರೊಂದಿಗೆ ಆರ್​ಸಿಬಿ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ ಎಂಬ ದಾಖಲೆ ಕೊಹ್ಲಿ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ (239 ಸಿಕ್ಸ್) ಹೆಸರಿನಲ್ಲಿತ್ತು. ಇದೀಗ 241 ಸಿಕ್ಸ್​ಗಳೊಂದಿಗೆ ಆರ್​ಸಿಬಿ ತಂಡದ ಸಿಕ್ಸರ್ ಸರದಾರನಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ.

3 / 6
ಇನ್ನು 241 ಸಿಕ್ಸ್​ಗಳೊಂದಿಗೆ ಐಪಿಎಲ್ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಮಹೇಂದ್ರ ಸಿಂಗ್ (239) ನಾಲ್ಕನೇ ಸ್ಥಾನದಲ್ಲಿದ್ದರು. ಇದೀಗ ಧೋನಿಯನ್ನು ಹಿಂದಿಕ್ಕಿ ಕಿಂಗ್ ಕೊಹ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಹಾಗೆಯೇ ಈ ಪಟ್ಟಿಯಲ್ಲಿ 357 ಸಿಕ್ಸ್​ ಸಿಡಿಸಿರುವ ಕ್ರಿಸ್ ಗೇಲ್ ಅಗ್ರಸ್ಥಾನದಲ್ಲಿದ್ದಾರೆ.

4 / 6
ಹಾಗೆಯೇ ಈ ಪಂದ್ಯದಲ್ಲಿ ಫೀಲ್ಡಿಂಗ್ ಮೂಲಕವೂ ವಿರಾಟ್ ಕೊಹ್ಲಿ ದಾಖಲೆ ಬರೆದಿದ್ದಾರೆ. ವೆಂಕಟೇಶ್ ಅಯ್ಯರ್ ಅವರು ನೀಡಿದ ಕ್ಯಾಚ್ ಹಿಡಿಯುವುದರೊಂದಿಗೆ ಐಪಿಎಲ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ರೈನಾ ಅವರ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದಾರೆ.

5 / 6
205 ಐಪಿಎಲ್​ ಪಂದ್ಯಗಳಲ್ಲಿ ಫೀಲ್ಡಿಂಗ್ ಮಾಡಿರುವ ಸುರೇಶ್ ರೈನಾ ಒಟ್ಟು 109 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಇದೀಗ 240 ಪಂದ್ಯಗಳ ಮೂಲಕ ವಿರಾಟ್ ಕೊಹ್ಲಿ (109 ಕ್ಯಾಚ್) ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಮುಂದಿನ ಪಂದ್ಯದಲ್ಲಿ ಕೊಹ್ಲಿ ಒಂದು ಕ್ಯಾಚ್ ಹಿಡಿದರೆ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಫೀಲ್ಡರ್ ಎನಿಸಿಕೊಳ್ಳಲಿದ್ದಾರೆ.

6 / 6
TV9 Web
TV9 Web

TV9 Kannada

Read More
Follow Us
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ

‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ

ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್

ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!

ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!

ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ

ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ

ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ

ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು

ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ