Virat Kohli: CSK ವಿರುದ್ಧ ಕಿಂಗ್ ಕೊಹ್ಲಿ ಅಬ್ಬರ: ಹಲವು ದಾಖಲೆಗಳು ಉಡೀಸ್
IPL 2024 RCB vs CSK: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸಿಎಸ್ಕೆ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಆರ್ಸಿಬಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 218 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 191 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್ಸಿಬಿ ತಂಡ 27 ರನ್ಗಳ ಭರ್ಜರಿ ಜಯ ಸಾಧಿಸಿದೆ.