Virat Kohli: CSK ವಿರುದ್ಧ ಕಿಂಗ್ ಕೊಹ್ಲಿ ಅಬ್ಬರ: ಹಲವು ದಾಖಲೆಗಳು ಉಡೀಸ್

|

Updated on: May 19, 2024 | 2:23 PM

IPL 2024 RCB vs CSK: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಆರ್​ಸಿಬಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 218 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 191 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 27 ರನ್​ಗಳ ಭರ್ಜರಿ ಜಯ ಸಾಧಿಸಿದೆ.

1 / 6
ಐಪಿಎಲ್​ನ (IPL 2024) 68ನೇ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ (Virat Kohli) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 29 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 47 ರನ್ ಬಾರಿಸಿದರು.

2 / 6
ಈ 47 ರನ್​ಗಳೊಂದಿಗೆ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಿರುವುದು ವಿಶೇಷ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

3 / 6
ಈ ಪಂದ್ಯದಲ್ಲಿ 47 ರನ್​ ಬಾರಿಸುವುದರೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 3000 ರನ್​ ಕಲೆಹಾಕಿದ ವಿಶೇಷ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಯಿತು. ಅಲ್ಲದೆ ಐಪಿಎಲ್​ನಲ್ಲಿ ಒಂದೇ ಸ್ಟೇಡಿಯಂನಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡರು.

4 / 6
ಈ ಪಂದ್ಯದಲ್ಲಿ ಎರಡಂಕಿ ಮೊತ್ತ ಕಲೆಹಾಕುವುದರೊಂದಿಗೆ ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್​ನಲ್ಲಿ 700+ ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡರು. ಅಲ್ಲದೆ ಐಪಿಎಲ್​ ಇತಿಹಾಸದಲ್ಲಿ ಎರಡು ಬಾರಿ 700+ ರನ್​ ಕಲೆಹಾಕಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಕೊಹ್ಲಿ 2016 ರಲ್ಲಿ 973 ರನ್ ಬಾರಿಸಿ ಮಿಂಚಿದ್ದರು.

5 / 6
ಈ ಪಂದ್ಯದಲ್ಲಿ ಬಾರಿಸಿದ 4 ಭರ್ಜರಿ ಸಿಕ್ಸರ್​ಗಳೊಂದಿಗೆ ವಿರಾಟ್ ಕೊಹ್ಲಿ ತಮ್ಮದೇ ದಾಖಲೆ ಮುರಿಯುವ ಹೊಸ್ತಿಲಿಗೆ ತಲುಪಿದ್ದಾರೆ. ಅಂದರೆ ಐಪಿಎಲ್ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟರ್​ನ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ 2016 ರಲ್ಲಿ 38 ಸಿಕ್ಸ್ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ 2024 ರಲ್ಲಿ ವಿರಾಟ್ ಕೊಹ್ಲಿ 37 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ ಸೀಸನ್​ವೊಂದರಲ್ಲಿ ಅತ್ಯಧಿಕ ಸಿಕ್ಸ್​ಗಳನ್ನು ಸಿಡಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ಕೊಹ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ್ದಾರೆ.

6 / 6
ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ 14 ಇನಿಂಗ್ಸ್​ಗಳಿಂದ ಒಟ್ಟು 708 ರನ್ ಕಲೆಹಾಕಿದ್ದಾರೆ. ಈ ವೇಳೆ 5 ಅರ್ಧಶತಕಗಳು ಹಾಗೂ 1 ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್​ ರೇಸ್​ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

Published On - 8:09 am, Sun, 19 May 24