AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ದಾಖಲೆಗಳ ಸರದಾರನ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 52ನೇ ಪಂದ್ಯದಲ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಈ ಮೂಲಕ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್, ಕೀರನ್ ಪೊಲಾರ್ಡ್ ಹಾಗೂ ಪಾಕಿಸ್ತಾನದ ಶೊಯೆಬ್ ಮಲಿಕ್ ಬಳಿಕ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: May 05, 2024 | 8:53 AM

Share
ಐಪಿಎಲ್​ನ (IPL 2024) 52ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಟಿ20 ಕ್ರಿಕೆಟ್​ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 27 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 42 ರನ್ ಬಾರಿಸಿದ್ದರು.

1 / 5
ಈ 42 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ 12500+ ರನ್ ಕಲೆಹಾಕಿದ ಮೊದಲ ಭಾರತೀಯ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎಂಬ ಹಿರಿಮೆಗೂ ಪಾತ್ರರಾದರು.

2 / 5
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ದಾಂಡಿಗ ಕ್ರಿಸ್ ಗೇಲ್ (14562 ರನ್ಸ್​), ಪಾಕಿಸ್ತಾನದ ಶೊಯೆಬ್ ಮಲಿಕ್ (13360), ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ (12900) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ನಾಲ್ಕನೇ ಬ್ಯಾಟರ್ ಆಗಿ ಕಿಂಗ್ ಕೊಹ್ಲಿ ಎಂಟ್ರಿ ಕೊಟ್ಟಿದ್ದಾರೆ.

3 / 5
ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 370 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 9355 ಎಸೆತಗಳನ್ನು ಎದುರಿಸಿ 12536 ರನ್ ಕಲೆಹಾಕಿದ್ದಾರೆ. ಈ ವೇಳೆ 9 ಶತಕ ಹಾಗೂ 95 ಅರ್ಧಶತಕಗಳನ್ನು ಕೂಡ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ಕಿಂಗ್​​ ಕೊಹ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

4 / 5
ಇನ್ನು ಈ 42 ರನ್​ಗಳೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ವಿರಾಟ್ ಕೊಹ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. 11 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಕೊಹ್ಲಿ ಒಟ್ಟು 542 ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ದರೆ, 10 ಇನಿಂಗ್ಸ್​ಗಳಲ್ಲಿ 509 ರನ್ ಕಲೆಹಾಕಿರುವ ರುತುರಾಜ್ ಗಾಯಕ್ವಾಡ್ ದ್ವಿತೀಯ ಸ್ಥಾನದಲ್ಲಿದ್ದಾರೆ.

5 / 5
Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ

ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು

ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ

ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?

ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ

ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ

BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ

ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು

ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK

ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ