Virat Kohli: ದಾಖಲೆಗಳ ಸರದಾರನ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆ
TV9 Web | Updated By: ಝಾಹಿರ್ ಯೂಸುಫ್
Updated on:
May 05, 2024 | 8:53 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 52ನೇ ಪಂದ್ಯದಲ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಈ ಮೂಲಕ ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್, ಕೀರನ್ ಪೊಲಾರ್ಡ್ ಹಾಗೂ ಪಾಕಿಸ್ತಾನದ ಶೊಯೆಬ್ ಮಲಿಕ್ ಬಳಿಕ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
1 / 5
ಐಪಿಎಲ್ನ (IPL 2024) 52ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಟಿ20 ಕ್ರಿಕೆಟ್ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 27 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 42 ರನ್ ಬಾರಿಸಿದ್ದರು.
2 / 5
ಈ 42 ರನ್ಗಳೊಂದಿಗೆ ಟಿ20 ಕ್ರಿಕೆಟ್ನಲ್ಲಿ 12500+ ರನ್ ಕಲೆಹಾಕಿದ ಮೊದಲ ಭಾರತೀಯ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎಂಬ ಹಿರಿಮೆಗೂ ಪಾತ್ರರಾದರು.
3 / 5
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ದಾಂಡಿಗ ಕ್ರಿಸ್ ಗೇಲ್ (14562 ರನ್ಸ್), ಪಾಕಿಸ್ತಾನದ ಶೊಯೆಬ್ ಮಲಿಕ್ (13360), ವೆಸ್ಟ್ ಇಂಡೀಸ್ನ ಕೀರನ್ ಪೊಲಾರ್ಡ್ (12900) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ನಾಲ್ಕನೇ ಬ್ಯಾಟರ್ ಆಗಿ ಕಿಂಗ್ ಕೊಹ್ಲಿ ಎಂಟ್ರಿ ಕೊಟ್ಟಿದ್ದಾರೆ.
4 / 5
ಟಿ20 ಕ್ರಿಕೆಟ್ನಲ್ಲಿ ಇದುವರೆಗೆ 370 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 9355 ಎಸೆತಗಳನ್ನು ಎದುರಿಸಿ 12536 ರನ್ ಕಲೆಹಾಕಿದ್ದಾರೆ. ಈ ವೇಳೆ 9 ಶತಕ ಹಾಗೂ 95 ಅರ್ಧಶತಕಗಳನ್ನು ಕೂಡ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭಾರತೀಯ ಬ್ಯಾಟರ್ಗಳ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.
5 / 5
ಇನ್ನು ಈ 42 ರನ್ಗಳೊಂದಿಗೆ ಈ ಬಾರಿಯ ಐಪಿಎಲ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲೂ ವಿರಾಟ್ ಕೊಹ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. 11 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಕೊಹ್ಲಿ ಒಟ್ಟು 542 ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ದರೆ, 10 ಇನಿಂಗ್ಸ್ಗಳಲ್ಲಿ 509 ರನ್ ಕಲೆಹಾಕಿರುವ ರುತುರಾಜ್ ಗಾಯಕ್ವಾಡ್ ದ್ವಿತೀಯ ಸ್ಥಾನದಲ್ಲಿದ್ದಾರೆ.