Virat Kohli: ಈ ಸಲ RCB ಡಬಲ್ ಧಮಾಕ: ವಿರಾಟ್ ಕೊಹ್ಲಿ ಘೋಷಣೆ

| Updated By: ಝಾಹಿರ್ ಯೂಸುಫ್

Updated on: Mar 20, 2024 | 12:01 PM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ರಲ್ಲಿ ಆರ್​ಸಿಬಿ ಕಪ್ ಗೆಲ್ಲಲಿದೆ ಎಂದು ವಿರಾಟ್ ಕೊಹ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದ್ದು, ಈ ಮೂಲಕ ಪುರುಷರ ತಂಡ ಕೂಡ ಕಪ್ ಗೆಲ್ಲಲಿದೆ ಎಂದು ಕಿಂಗ್ ಕೊಹ್ಲಿ ಹೇಳಿದ್ದಾರೆ.

1 / 6
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರಂಗೇಲು ಇನ್ನು ಉಳಿದಿರುವುದು ದಿನಗಳು ಮಾತ್ರ. ಶುಕ್ರವಾರದಿಂದ ಐಪಿಎಲ್ ಸೀಸನ್ 17 ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಸಿಎಸ್​ಕೆ ಮತ್ತು ಆರ್​ಸಿಬಿ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಶುಭಾರಂಭ ಮಾಡುವ ಇರಾದೆಯಲ್ಲಿದೆ ಆರ್​ಸಿಬಿ.

2 / 6
ಇತ್ತ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಹೊಸ ಹುಮ್ಮಸ್ಸಿನಲ್ಲಿದ್ದಾರೆ. ಅಲ್ಲದೆ ಈ ಬಾರಿ ಐಪಿಎಲ್​ ಟ್ರೋಫಿಯನ್ನು ಎತ್ತಿ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಡಬಲ್ ಧಮಾಕ ನೀಡುವ ಸೂಚನೆ ನೀಡಿದ್ದಾರೆ.

3 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ಆರ್​ಸಿಬಿಗೆ ಕಪ್ ಗೆಲ್ಲುವುದು ನನ್ನ ದೊಡ್ಡ ಕಸನು. ಟ್ರೋಫಿ ಗೆದ್ದಾಗ ಸಿಗುವ ಫೀಲ್ ಹೇಗಿರಲಿದೆ ಎಂಬುದನ್ನು ಅನುಭವಿಸುವ ಆಸೆಯಿದೆ. ಈ ವರ್ಷ ಅದು ಡಬಲ್ ಆಗುವ ವಿಶ್ವಾಸವಿದೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

4 / 6
ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಆರ್​ಸಿಬಿ ಅಭಿಮಾನಿಗಳಿಗೆ ಬಿಗ್ ಗಿಫ್ಟ್ ನೀಡಿದ್ದಾರೆ. ಇದೀಗ ನಾವು ಸಹ ಟ್ರೋಫಿ ಮುಡಿಗೇರಿಸಿಕೊಳ್ಳುವ ಮೂಲಕ ಅಭಿಮಾನಿಗಳ ಖುಷಿಯನ್ನು ಡಬಲ್ ಮಾಡಲಿದ್ದೇವೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

5 / 6
ಈ ಮೂಲಕ ಆರ್​ಸಿಬಿ ಈ ಸಲ ಕಪ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಕಿಂಗ್ ಕೊಹ್ಲಿ ವ್ಯಕ್ತಪಡಿಸಿದ್ದು, ಅಲ್ಲದೆ ಈ ಗೆಲುವಿನೊಂದಿಗೆ ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಅದರಂತೆ ಈ ಸಲ ಆರ್​ಸಿಬಿ ಚಾಂಪಿಯನ್ ಪಟ್ಟಕ್ಕೇರಲಿದೆಯಾ ಕಾದು ನೋಡಬೇಕಿದೆ.

6 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.