AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮುಗಿದ ಅಧ್ಯಾಯ… ಕಣ್ಣೀರು ಹಾಕಿದ ವಿರಾಟ್ ಕೊಹ್ಲಿ

IPL 2024 RR vs RCB: ಅಹದಾಬಾದ್​ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 172 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ತಂಡವು 19 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ 4 ವಿಕೆಟ್​ಗಳ ಜಯದೊಂದಿಗೆ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.

TV9 Web
| Edited By: |

Updated on: May 23, 2024 | 7:51 AM

Share
ಈ ಬಾರಿಯ ಐಪಿಎಲ್​ನಲ್ಲಿ (IPL 2024) ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ನಿರ್ಣಾಯಕ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು ಮಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ಗೆ ಲಗ್ಗೆಯಿಟ್ಟಿದೆ.

1 / 5
ಇತ್ತ ಗೆಲುವಿನ ನಿರೀಕ್ಷೆಯೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 17ನೇ ಬಾರಿ ಸೋಲಿನೊಂದಿಗೆ ಐಪಿಎಲ್​ ಅಭಿಯಾನ ಅಂತ್ಯಗೊಳಿಸಿದ್ದಾರೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುತ್ತಿದ್ದಂತೆ ಇತ್ತ ಕಿಂಗ್ ಕೊಹ್ಲಿ ಭಾವುಕರಾದರು.

2 / 5
ಅದರಲ್ಲೂ ವಿರಾಟ್ ಕೊಹ್ಲಿ ಮುಖ ಮರೆಮಾಚಿ ಡಗೌಟ್​ನಲ್ಲಿ ಕೂತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದೀಗ ಈ ಫೋಟೋ ಮುಂದುವರೆದ ಕೊಹ್ಲಿಯ ಕಣ್ಣೀರ ಕಥೆ ಎಂಬ ಟ್ಯಾಗ್​ ಲೈನ್​ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

3 / 5
ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ 15 ಪಂದ್ಯಗಳಿಂದ 741 ರನ್ ಕಲೆಹಾಕಿದ್ದರು. ಅದರಲ್ಲೂ ಕೊನೆಯ 6 ಪಂದ್ಯಗಳಲ್ಲಿ ಆರ್​ಸಿಬಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಕಾರಣ ಈ ಸಲ ಫೈನಲ್​ಗೇರುವ ನಿರೀಕ್ಷೆಯಿತ್ತು.

4 / 5
ಆದರೆ ನಿರ್ಣಾಯಕ ಪಂದ್ಯದಲ್ಲಿ ಆರ್​ಸಿಬಿ ಮುಗ್ಗರಿಸಿದೆ. ಇದರೊಂದಿಗೆ 17 ವರ್ಷಗಳ ವಿರಾಟ್ ಕೊಹ್ಲಿಯ ಕನಸು ಕೂಡ ಕಮರಿದೆ. ಅಂದರೆ ಕಳೆದ 16 ವರ್ಷಗಳಿಂದ ಟ್ರೋಫಿ ಎತ್ತಿ ಹಿಡಿಯಬೇಕೆಂಬ ಹಂಬಲ ಹೊಂದಿರುವ ಕಿಂಗ್ ಕೊಹ್ಲಿಗೆ ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸವಿತ್ತು. ಆದರೀಗ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ಮೂಲಕ ಆರ್​ಸಿಬಿ ತಂಡದ ಟ್ರೋಫಿ ಗೆಲ್ಲುವ ಕನಸು ಕನಸಾಗಿಯೇ ಉಳಿದಿದೆ.

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!

ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ

CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?

ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್

ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!

ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು