Virat Kohli: ಮುಗಿದ ಅಧ್ಯಾಯ… ಕಣ್ಣೀರು ಹಾಕಿದ ವಿರಾಟ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
May 23, 2024 | 7:51 AM
IPL 2024 RR vs RCB: ಅಹದಾಬಾದ್ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 172 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನಲ್ಲೇ ರಾಜಸ್ಥಾನ್ ರಾಯಲ್ಸ್ ತಂಡವು 19 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ 4 ವಿಕೆಟ್ಗಳ ಜಯದೊಂದಿಗೆ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.
1 / 5
ಈ ಬಾರಿಯ ಐಪಿಎಲ್ನಲ್ಲಿ (IPL 2024) ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ನಿರ್ಣಾಯಕ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಅಹದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಮಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್ಗೆ ಲಗ್ಗೆಯಿಟ್ಟಿದೆ.
2 / 5
ಇತ್ತ ಗೆಲುವಿನ ನಿರೀಕ್ಷೆಯೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 17ನೇ ಬಾರಿ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದ್ದಾರೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುತ್ತಿದ್ದಂತೆ ಇತ್ತ ಕಿಂಗ್ ಕೊಹ್ಲಿ ಭಾವುಕರಾದರು.
3 / 5
ಅದರಲ್ಲೂ ವಿರಾಟ್ ಕೊಹ್ಲಿ ಮುಖ ಮರೆಮಾಚಿ ಡಗೌಟ್ನಲ್ಲಿ ಕೂತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದೀಗ ಈ ಫೋಟೋ ಮುಂದುವರೆದ ಕೊಹ್ಲಿಯ ಕಣ್ಣೀರ ಕಥೆ ಎಂಬ ಟ್ಯಾಗ್ ಲೈನ್ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
4 / 5
ಈ ಬಾರಿಯ ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ 15 ಪಂದ್ಯಗಳಿಂದ 741 ರನ್ ಕಲೆಹಾಕಿದ್ದರು. ಅದರಲ್ಲೂ ಕೊನೆಯ 6 ಪಂದ್ಯಗಳಲ್ಲಿ ಆರ್ಸಿಬಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಕಾರಣ ಈ ಸಲ ಫೈನಲ್ಗೇರುವ ನಿರೀಕ್ಷೆಯಿತ್ತು.
5 / 5
ಆದರೆ ನಿರ್ಣಾಯಕ ಪಂದ್ಯದಲ್ಲಿ ಆರ್ಸಿಬಿ ಮುಗ್ಗರಿಸಿದೆ. ಇದರೊಂದಿಗೆ 17 ವರ್ಷಗಳ ವಿರಾಟ್ ಕೊಹ್ಲಿಯ ಕನಸು ಕೂಡ ಕಮರಿದೆ. ಅಂದರೆ ಕಳೆದ 16 ವರ್ಷಗಳಿಂದ ಟ್ರೋಫಿ ಎತ್ತಿ ಹಿಡಿಯಬೇಕೆಂಬ ಹಂಬಲ ಹೊಂದಿರುವ ಕಿಂಗ್ ಕೊಹ್ಲಿಗೆ ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸವಿತ್ತು. ಆದರೀಗ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ಮೂಲಕ ಆರ್ಸಿಬಿ ತಂಡದ ಟ್ರೋಫಿ ಗೆಲ್ಲುವ ಕನಸು ಕನಸಾಗಿಯೇ ಉಳಿದಿದೆ.