Virat Kohli: ಈ ಸಲ ಆರೆಂಜ್ ಕ್ಯಾಪ್ ನಮ್ದೆ
IPL 2024: ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಕೇವಲ 15 ಇನಿಂಗ್ಸ ಆಡಿದ್ದ ಕೊಹ್ಲಿ 1 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 741 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ 2024ರ ಆರೆಂಜ್ ಕ್ಯಾಪ್ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ.
1 / 5
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರ ಆರೆಂಜ್ ಕ್ಯಾಪ್ ವಿರಾಟ್ ಕೊಹ್ಲಿ ಪಾಲಾಗುವುದು ಬಹುತೇಕ ಖಚಿತವಾಗಿದೆ. ಏಕೆಂದರೆ ಆರೆಂಜ್ ಕ್ಯಾಪ್ ರೇಸ್ನಲ್ಲಿದ್ದ ಬಹುತೇಕ ಆಟಗಾರರು ಈಗಾಗಲೇ ಐಪಿಎಲ್ನಿಂದ ಹೊರಬಿದ್ದಿದ್ದಾರೆ. ಹೀಗಾಗಿ ಈ ಬಾರಿಯ ರನ್ ಸರದಾರನ ಪಟ್ಟ ಕಿಂಗ್ ಕೊಹ್ಲಿಗೆ ಒಲಿಯಲಿದೆ.
2 / 5
ಇದಕ್ಕೂ ಮುನ್ನ ಆರೆಂಜ್ ಕ್ಯಾಪ್ ರೇಸ್ನಲ್ಲಿ ವಿರಾಟ್ ಕೊಹ್ಲಿ, ರಿಯಾನ್ ಪರಾಗ್ ಹಾಗೂ ಟ್ರಾವಿಸ್ ಹೆಡ್ ನಡುವೆ ನೇರ ಪೈಪೋಟಿ ಇತ್ತು. ಆದರೆ ಎಸ್ಆರ್ಹೆಚ್ ವಿರುದ್ಧದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲನುಭವಿಸಿ ರಾಜಸ್ಥಾನ್ ರಾಯಲ್ಸ್ ತಂಡ ಹೊರಬಿದ್ದಿದೆ.
3 / 5
ಇದರೊಂದಿಗೆ 15 ಇನಿಂಗ್ಸ್ಗಳಲ್ಲಿ 4 ಅರ್ಧಶತಕಗಳೊಂದಿಗೆ 573 ರನ್ ಬಾರಿಸಿ ಮಿಂಚಿದ್ದ ಯುವ ದಾಂಡಿಗ ರಿಯಾನ್ ಪರಾಗ್ ಆರೆಂಜ್ ಕ್ಯಾಪ್ ರೇಸ್ನಿಂದ ಹೊರಬಿದ್ದಿದ್ದಾರೆ.
4 / 5
ಇನ್ನುಳಿದಿರುವುದು ಸನ್ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಮಾತ್ರ. 14 ಇನಿಂಗ್ಸ್ ಆಡಿರುವ ಹೆಡ್ ಒಟ್ಟು 567 ರನ್ ಕಲೆಹಾಕಿದ್ದಾರೆ. ಇನ್ನು ಫೈನಲ್ ಪಂದ್ಯದಲ್ಲಿ 175 ರನ್ ಬಾರಿಸಿದರೆ ಮಾತ್ರ ಆರೆಂಜ್ ಕ್ಯಾಪ್ ಅನ್ನು ಮುಡಿಗೇರಿಸಿಕೊಳ್ಳಬಹುದು. ಆದರೆ ಇದು ಕಷ್ಟಸಾಧ್ಯ ಎಂದೇ ಹೇಳಬಹುದು.
5 / 5
ಹೀಗಾಗಿ 15 ಇನಿಂಗ್ಸ್ಗಳಲ್ಲಿ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ 741 ರನ್ ಕಲೆಹಾಕಿರುವ ವಿರಾಟ್ ಕೊಹ್ಲಿಗೆ ಆರೆಂಜ್ ಕ್ಯಾಪ್ ಒಲಿಯುವುದು ಬಹುತೇಕ ಖಚಿತ. ಈ ಮೂಲಕ 2016ರ ಬಳಿಕ ಕಿಂಗ್ ಕೊಹ್ಲಿ ಮತ್ತೊಮ್ಮೆ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಳ್ಳಲಿದ್ದಾರೆ ಎಂದೇ ಹೇಳಬಹುದು.