Virat Kohli: 6 ರನ್ಗಳೊಂದಿಗೆ ಹೊಸ ಇತಿಹಾಸ ಬರೆಯಲಿದ್ದಾರೆ ಕಿಂಗ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
May 04, 2024 | 12:53 PM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ 10 ಪಂದ್ಯಗಳಿಂದ ಒಟ್ಟು 500 ರನ್ ಕಲೆಹಾಕಿದ್ದಾರೆ. ಈ ರನ್ಗಳೊಂದಿಗೆ ಆರೆಂಜ್ ಕ್ಯಾಪ್ ರೇಸ್ನಲ್ಲಿ ದ್ವಿತೀಯ ಸ್ಥಾನದಲ್ಲಿರುವ ಕಿಂಗ್ ಕೊಹ್ಲಿ ಇದೀಗ ವಿಶೇಷ ದಾಖಲೆ ಬರೆಯುವ ಅವಕಾಶವನ್ನು ಹೊಂದಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...
1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ನ (IPL 2024) 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ವಿಶೇಷ ದಾಖಲೆ ಬರೆಯುವ ಅವಕಾಶ ವಿರಾಟ್ ಕೊಹ್ಲಿ (Virat Kohli) ಮುಂದಿದೆ.
2 / 5
ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 6 ರನ್ ಕಲೆಹಾಕಿದರೆ ಟಿ20 ಕ್ರಿಕೆಟ್ನಲ್ಲಿ 12500 ರನ್ ಪೂರೈಸಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.
3 / 5
ಟಿ20 ಕ್ರಿಕೆಟ್ನಲ್ಲಿ ಇದುವರೆಗೆ 369 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 9328 ಎಸೆತಗಳನ್ನು ಎದುರಿಸಿ 12494 ರನ್ ಕಲೆಹಾಕಿದ್ದಾರೆ. ಈ ವೇಳೆ 9 ಶತಕ ಹಾಗೂ 95 ಅರ್ಧಶತಕಗಳನ್ನು ಕೂಡ ಸಿಡಿಸಿದ್ದಾರೆ. ಇದೀಗ 12494 ರನ್ಗಳಿಗೆ 6 ರನ್ ಸೇರ್ಪಡೆಯಾದರೆ, ಟಿ20 ಕ್ರಿಕೆಟ್ನಲ್ಲಿ 12500 ರನ್ ಪೂರೈಸಿದ ವಿಶೇಷ ದಾಖಲೆ ನಿರ್ಮಾಣವಾಗಲಿದೆ.
4 / 5
ಈ ಬಾರಿಯ ಐಪಿಎಲ್ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ 10 ಇನಿಂಗ್ಸ್ಗಳಿಂದ ಒಟ್ಟು 500 ರನ್ ಕಲೆಹಾಕಿದ್ದಾರೆ. ಈ ವೇಳೆ 4 ಅರ್ಧಶತಕ ಹಾಗೂ 1 ಭರ್ಜರಿ ಶತಕವನ್ನು ಸಿಡಿಸಿದ್ದಾರೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆಯನ್ನು ನಿರೀಕ್ಷಿಸಬಹುದು.
5 / 5
ಇನ್ನು ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ವೆಸ್ಟ್ ಇಂಡೀಸ್ ದಾಂಡಿಗ ಕ್ರಿಸ್ ಗೇಲ್ 14562 ರನ್ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, 13360 ರನ್ ಕಲೆಹಾಕಿರುವ ಪಾಕಿಸ್ತಾನದ ಶೊಯೆಬ್ ಮಲಿಕ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು 12900 ರನ್ ಬಾರಿಸಿರುವ ವೆಸ್ಟ್ ಇಂಡೀಸ್ನ ಕೀರನ್ ಪೊಲಾರ್ಡ್ ತೃತೀಯ ಸ್ಥಾನದಲ್ಲಿದ್ದಾರೆ. ಇದೀಗ 12494 ರನ್ಗಳೊಂದಿಗೆ ವಿರಾಟ್ ಕೊಹ್ಲಿ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.