AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ನಿರ್ಣಾಯಕ ಪಂದ್ಯವೇ ಕಿಂಗ್ ಕೊಹ್ಲಿ ಪಾಲಿನ ವಿಶೇಷ ಪಂದ್ಯ..!

IPL 2024: ಐಪಿಎಲ್​ 2024ರ 62ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆಯಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ 4ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ. ಇದರ ಜೊತೆಗೆ ಒಂದೇ ಫ್ರಾಂಚೈಸಿ ಪರ ವಿಶೇಷ ಮೈಲುಗಲ್ಲು ದಾಟಿದ ಅಪರೂಪದ ದಾಖಲೆಯೊಂದು ಕಿಂಗ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಲಿದೆ.

ಝಾಹಿರ್ ಯೂಸುಫ್
|

Updated on:May 12, 2024 | 11:11 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17ರ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಸೆಣಸಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮೇ 12) ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಅಂದರೆ ಪ್ಲೇಆಫ್ ರೇಸ್​ನಲ್ಲಿ ಉಳಿದುಕೊಳ್ಳಬೇಕಿದ್ದರೆ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಲೇಬೇಕು. ವಿಶೇಷ ಎಂದರೆ ಈ ನಿರ್ಣಾಯಕ ಪಂದ್ಯವೇ ವಿರಾಟ್ ಕೊಹ್ಲಿ ಪಾಲಿಗೆ ವಿಶೇಷ ಮೈಲುಗಲ್ಲಿನ ಪಂದ್ಯವಾಗಿದೆ.

1 / 7
ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 250 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆಯಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ 4ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

2 / 7
ಇದಕ್ಕೂ ಮುನ್ನ ಮಹೇಂದ್ರ ಸಿಂಗ್ ಧೋನಿ (262), ರೋಹಿತ್ ಶರ್ಮಾ (256) ಹಾಗೂ ದಿನೇಶ್ ಕಾರ್ತಿಕ್ (254) ಈ ಸಾಧನೆ ಮಾಡಿದ್ದರು. ಇದೀಗ ಈ ಸಾಧಕರ ಪಟ್ಟಿಗೆ ವಿರಾಟ್ ಕೊಹ್ಲಿ ಕೂಡ ಎಂಟ್ರಿ ಕೊಡುತ್ತಿದ್ದಾರೆ.

3 / 7
ಈ ದಾಖಲೆಯೊಂದಿಗೆ ಐಪಿಎಲ್ ಇತಿಹಾಸದಲ್ಲಿ ಒಂದೇ ಫ್ರಾಂಚೈಸಿ ಪರ 250 ಪಂದ್ಯಗಳನ್ನಾಡಿದ ವಿಶೇಷ ರೆಕಾರ್ಡ್​ವೊಂದು ಕಿಂಗ್ ಕೊಹ್ಲಿ ಪಾಲಾಗಿದೆ. ಕೊಹ್ಲಿಯನ್ನು ಹೊರತುಪಡಿಸಿ ಯಾವುದೇ ಆಟಗಾರ  ಐಪಿಎಲ್​ನಲ್ಲಿ ಒಂದೇ ತಂಡದ 250 ಪಂದ್ಯಗಳನ್ನಾಡಿಲ್ಲ.

4 / 7
ಧೋನಿ ಸಿಎಸ್​ಕೆ, ರೈಸಿಂಗ್ ಪುಣೆ ಜೈಂಟ್ಸ್ ವಿರುದ್ಧ ಕಣಕ್ಕಿಳಿದು ಈ ಸಾಧನೆ ಮಾಡಿದ್ದರೆ, ರೋಹಿತ್ ಶರ್ಮಾ ಡೆಕ್ಕನ್ ಚಾರ್ಜರ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ಮೂಲಕ ಈ ದಾಖಲೆ ಬರೆದಿದ್ದಾರೆ. ಇನ್ನು ದಿನೇಶ್ ಕಾರ್ತಿಕ್ ಆರ್​ಸಿಬಿ, ಕೆಕೆಆರ್, ಮುಂಬೈ ಇಂಡಿಯನ್ಸ್, ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯುವ ಮೂಲಕ ಈ ಸಾಧನೆ ಮಾಡಿದ್ದಾರೆ.

5 / 7
ಆದರೆ ಇತ್ತ 2008 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುತ್ತಿರುವ ವಿರಾಟ್ ಕೊಹ್ಲಿ ಇದೀಗ 250 ಪಂದ್ಯಗಳ ಹೊಸ್ತಿಲಿಗೆ ಬಂದು ನಿಂತಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಒಂದೇ ತಂಡದ ಪರ 250 ಮ್ಯಾಚ್​ಗಳನ್ನಾಡಿದ ವಿಶೇಷ ದಾಖಲೆಯೊಂದನ್ನು ಬರೆಯಲು ಕಿಂಗ್ ಕೊಹ್ಲಿ ಸಜ್ಜಾಗಿದ್ದಾರೆ.

6 / 7
ಆರ್​ಸಿಬಿ ಪರ ಇದುವರೆಗೆ 249 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 8 ಭರ್ಜರಿ ಶತಕಗೊಂದಿಗೆ ಒಟ್ಟು 7897 ರನ್ ಕಲೆಹಾಕಿದ್ದಾರೆ. ಈ ಮೂಲಕ ಒಂದೇ ಫ್ರಾಂಚೈಸಿ ಪರ ಅತ್ಯಧಿಕ ರನ್ ಕಲೆಹಾಕಿದ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಈ ದಾಖಲೆಯ ಜೊತೆಗೆ ಇದೀಗ 250 ಪಂದ್ಯಗಳ ಹೊಸ ರೆಕಾರ್ಡ್ ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಲಿದೆ.

7 / 7

Published On - 11:07 am, Sun, 12 May 24

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ

ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!

‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ

ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!

ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​

ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್

ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ

ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು