ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಸೆಣಸಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮೇ 12) ನಡೆಯಲಿರುವ ಈ ಪಂದ್ಯವು ಆರ್ಸಿಬಿ ಪಾಲಿಗೆ ನಿರ್ಣಾಯಕ. ಅಂದರೆ ಪ್ಲೇಆಫ್ ರೇಸ್ನಲ್ಲಿ ಉಳಿದುಕೊಳ್ಳಬೇಕಿದ್ದರೆ ಇಂದಿನ ಪಂದ್ಯದಲ್ಲಿ ಆರ್ಸಿಬಿ ಗೆಲ್ಲಲೇಬೇಕು. ವಿಶೇಷ ಎಂದರೆ ಈ ನಿರ್ಣಾಯಕ ಪಂದ್ಯವೇ ವಿರಾಟ್ ಕೊಹ್ಲಿ ಪಾಲಿಗೆ ವಿಶೇಷ ಮೈಲುಗಲ್ಲಿನ ಪಂದ್ಯವಾಗಿದೆ.
ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ 250 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆಯಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ 4ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.
ಇದಕ್ಕೂ ಮುನ್ನ ಮಹೇಂದ್ರ ಸಿಂಗ್ ಧೋನಿ (262), ರೋಹಿತ್ ಶರ್ಮಾ (256) ಹಾಗೂ ದಿನೇಶ್ ಕಾರ್ತಿಕ್ (254) ಈ ಸಾಧನೆ ಮಾಡಿದ್ದರು. ಇದೀಗ ಈ ಸಾಧಕರ ಪಟ್ಟಿಗೆ ವಿರಾಟ್ ಕೊಹ್ಲಿ ಕೂಡ ಎಂಟ್ರಿ ಕೊಡುತ್ತಿದ್ದಾರೆ.
ಈ ದಾಖಲೆಯೊಂದಿಗೆ ಐಪಿಎಲ್ ಇತಿಹಾಸದಲ್ಲಿ ಒಂದೇ ಫ್ರಾಂಚೈಸಿ ಪರ 250 ಪಂದ್ಯಗಳನ್ನಾಡಿದ ವಿಶೇಷ ರೆಕಾರ್ಡ್ವೊಂದು ಕಿಂಗ್ ಕೊಹ್ಲಿ ಪಾಲಾಗಿದೆ. ಕೊಹ್ಲಿಯನ್ನು ಹೊರತುಪಡಿಸಿ ಯಾವುದೇ ಆಟಗಾರ ಐಪಿಎಲ್ನಲ್ಲಿ ಒಂದೇ ತಂಡದ 250 ಪಂದ್ಯಗಳನ್ನಾಡಿಲ್ಲ.
ಧೋನಿ ಸಿಎಸ್ಕೆ, ರೈಸಿಂಗ್ ಪುಣೆ ಜೈಂಟ್ಸ್ ವಿರುದ್ಧ ಕಣಕ್ಕಿಳಿದು ಈ ಸಾಧನೆ ಮಾಡಿದ್ದರೆ, ರೋಹಿತ್ ಶರ್ಮಾ ಡೆಕ್ಕನ್ ಚಾರ್ಜರ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ಮೂಲಕ ಈ ದಾಖಲೆ ಬರೆದಿದ್ದಾರೆ. ಇನ್ನು ದಿನೇಶ್ ಕಾರ್ತಿಕ್ ಆರ್ಸಿಬಿ, ಕೆಕೆಆರ್, ಮುಂಬೈ ಇಂಡಿಯನ್ಸ್, ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿಯುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಆದರೆ ಇತ್ತ 2008 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುತ್ತಿರುವ ವಿರಾಟ್ ಕೊಹ್ಲಿ ಇದೀಗ 250 ಪಂದ್ಯಗಳ ಹೊಸ್ತಿಲಿಗೆ ಬಂದು ನಿಂತಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಒಂದೇ ತಂಡದ ಪರ 250 ಮ್ಯಾಚ್ಗಳನ್ನಾಡಿದ ವಿಶೇಷ ದಾಖಲೆಯೊಂದನ್ನು ಬರೆಯಲು ಕಿಂಗ್ ಕೊಹ್ಲಿ ಸಜ್ಜಾಗಿದ್ದಾರೆ.
ಆರ್ಸಿಬಿ ಪರ ಇದುವರೆಗೆ 249 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 8 ಭರ್ಜರಿ ಶತಕಗೊಂದಿಗೆ ಒಟ್ಟು 7897 ರನ್ ಕಲೆಹಾಕಿದ್ದಾರೆ. ಈ ಮೂಲಕ ಒಂದೇ ಫ್ರಾಂಚೈಸಿ ಪರ ಅತ್ಯಧಿಕ ರನ್ ಕಲೆಹಾಕಿದ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಈ ದಾಖಲೆಯ ಜೊತೆಗೆ ಇದೀಗ 250 ಪಂದ್ಯಗಳ ಹೊಸ ರೆಕಾರ್ಡ್ ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಲಿದೆ.
Published On - 11:07 am, Sun, 12 May 24