Virat Kohli: ಕಿಂಗ್​ಡಮ್​ನಲ್ಲಿ ದಾಖಲೆ ಬರೆದ ಕಿಂಗ್ ಕೊಹ್ಲಿ

Edited By:

Updated on: Apr 02, 2024 | 11:10 PM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17ರ 15ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ಆಟಗಾರ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಆರ್​ಸಿಬಿ ತಂಡದ ತವರು ಮೈದಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿದು ಬರೆದಿರುವ ದಾಖಲೆ ಎಂಬುದು ವಿಶೇಷ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 15ನೇ ಪಂದ್ಯದಲ್ಲಿ ಕಣಕ್ಕಿಳಿದು ವಿರಾಟ್ ಕೊಹ್ಲಿ (Virat Kohli) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಕಿಂಗ್​ಡಮ್​ನಲ್ಲಿ 100ನೇ ಪಂದ್ಯವಾಡುವ ಮೂಲಕ ಎಂಬುದು ವಿಶೇಷ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 15ನೇ ಪಂದ್ಯದಲ್ಲಿ ಕಣಕ್ಕಿಳಿದು ವಿರಾಟ್ ಕೊಹ್ಲಿ (Virat Kohli) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಕಿಂಗ್​ಡಮ್​ನಲ್ಲಿ 100ನೇ ಪಂದ್ಯವಾಡುವ ಮೂಲಕ ಎಂಬುದು ವಿಶೇಷ.

2 / 5

ಅಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 100 ಟಿ20 ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ಹಿರಿಮೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ಮೂಲಕ ಕೊಹ್ಲಿ ಈ ಸಾಧನೆ ಮಾಡಿದ್ದು, ಈ ಮೂಲಕ ಒಂದೇ ಸ್ಟೇಡಿಯಂನಲ್ಲಿ ನೂರು ಟಿ20 ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 5

ಆರ್‌ಸಿಬಿಯ ತವರು ಮೈದಾನದಲ್ಲಿ 100 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಇದುವರೆಗೆ 3298 ರನ್ ಗಳಿಸಿದ್ದಾರೆ. ಈ ವೇಳೆ ನಾಲ್ಕು ಭರ್ಜರಿ ಶತಕಗಳು ಮತ್ತು 25 ಅರ್ಧಶತಕಗಳನ್ನು ಬಾರಿಸಿದ್ದಾರೆ.

4 / 5

ಆದರೆ ತಮ್ಮ ನೂರನೇ ಪಂದ್ಯದಲ್ಲಿ ಮೋಡಿ ಮಾಡುವಲ್ಲಿ ಕಿಂಗ್ ಕೊಹ್ಲಿ ವಿಫಲರಾದರು. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ ಉತ್ತಮ ಆರಂಭ ಪಡೆದರೂ ಕೇವಲ 22 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ನೂರನೇ ಪಂದ್ಯದಲ್ಲಿ 100ರ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.

5 / 5

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ 153 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 28 ರನ್​ಗಳಿಂದ ಸೋಲನುಭವಿಸಿದೆ.

Loading...
Unable to load recommendations.
Follow Us