Virat Kohli: RCB ಸೋತರೂ, 2 ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ

| Updated By: ಝಾಹಿರ್ ಯೂಸುಫ್

Updated on: Mar 23, 2024 | 7:02 AM

Virat Kohli Records: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಾಧಾರಣ ಪ್ರದರ್ಶನ ನೀಡಿದರೂ ವಿರಾಟ್ ಕೊಹ್ಲಿ 2 ಭರ್ಜರಿ ದಾಖಲೆ ಬರೆದಿದ್ದಾರೆ. ಈ ದಾಖಲೆಗಳಲ್ಲಿ ಒಂದು ವಿಶ್ವ ದಾಖಲೆ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದ ವಿಶೇಷ ಸಾಧಕರ ಪಟ್ಟಿಗೆ ಇದೀಗ ಕಿಂಗ್ ಕೊಹ್ಲಿ ಕೂಡ ಸೇರ್ಪಡೆಯಾಗಿದ್ದಾರೆ.

1 / 6
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) 2 ಭರ್ಜರಿ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಇನಿಂಗ್ಸ್ ಆರಂಭಿಸಿದ್ದರು.

2 / 6
ಆರಂಭಿಕನಾಗಿ ಬ್ಯಾಟ್ ಬೀಸಿದ ವಿರಾಟ್ ಕೊಹ್ಲಿ 20 ಎಸೆತಗಳಲ್ಲಿ 21 ರನ್ ಬಾರಿಸಿ ಮುಸ್ತಫಿಜುರ್ ರೆಹಮಾನ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಈ 21 ರನ್​ಗಳೊಂದಿಗೆ ಕಿಂಗ್ ಕೊಹ್ಲಿ 2 ದಾಖಲೆಗಳನ್ನು ತಮ್ಮದಾಗಿಸಿಕೊಂಡರು. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

3 / 6
1- ಸಾವಿರ ರನ್ ಸರದಾರ: ಐಪಿಎಲ್​ ಇತಿಹಾಸದಲ್ಲೇ 2 ತಂಡಗಳ ವಿರುದ್ಧ 1 ಸಾವಿರಕ್ಕೂ ಅಧಿಕ ರನ್ ಬಾರಿಸಿದ ಮೊದಲ ಭಾರತೀಯ ಬ್ಯಾಟರ್​ ಎಂಬ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ 15 ರನ್​ಗಳಿಸುವುದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 1000 ರನ್​ ಕಲೆಹಾಕಿದ ವಿಶೇಷ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವಿರಾಟ್ ಕೊಹ್ಲಿ 1000 ರನ್ ಪೂರೈಸಿ ದಾಖಲೆ ಬರೆದಿದ್ದರು. ಇದೀಗ ಐಪಿಎಲ್​ನಲ್ಲಿ 2 ತಂಡಗಳ ವಿರುದ್ಧ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

4 / 6
2- 12 ಸಾವಿರ ರನ್​ಗಳು: ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹಿರಿಮೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ 6 ರನ್​ ಕಲೆಹಾಕುವುದರೊಂದಿಗೆ ಕಿಂಗ್ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕ್ರಿಸ್ ಗೇಲ್. ಯೂನಿವರ್ಸ್ ಬಾಸ್ ಖ್ಯಾತಿಯ ಗೇಲ್ ಕೇವಲ 345 ಇನಿಂಗ್ಸ್​ಗಳಲ್ಲಿ 12000 ರನ್​ ಪೂರೈಸಿ ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದಿದ್ದಾರೆ. ಇದೀಗ 360 ಇನಿಂಗ್ಸ್​ಗಳ ಮೂಲಕ 12 ಸಾವಿರ ರನ್ ಪೂರೈಸಿರುವ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

6 / 6
CSK vs RCB 2024: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು. 174 ರನ್​ಗಳ ಸ್ಪರ್ಧಾತ್ಮಕ ಟಾರ್ಗೆಟ್ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.