Virat Kohli: ರಿಂಕು ಸಿಂಗ್ಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Mar 31, 2024 | 7:53 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಆರ್ಸಿಬಿ ತಂಡವು ಇದುವರೆಗೆ 3 ಪಂದ್ಯಗಳನ್ನಾಡಿದೆ. ಮೊದಲ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ಸೋತಿದ್ದ ಆರ್ಸಿಬಿ ತಂಡವು 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿತ್ತು. ಇನ್ನು ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಮತ್ತೆ ಸೋಲನುಭವಿಸುವ ಮೂಲಕ RCB ನಿರಾಸೆ ಮೂಡಿಸಿದೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ಬಳಿಕ ಕೆಕೆಆರ್ ತಂಡದ ಬ್ಯಾಟರ್ ರಿಂಕು ಸಿಂಗ್ ಆರ್ಸಿಬಿ ತಂಡದ ಡ್ರೆಸ್ಸಿಂಗ್ ರೂಮ್ನಲ್ಲಿ ಕಾಣಿಸಿಕೊಂಡಿದ್ದರು.
2 / 5
ವಿರಾಟ್ ಕೊಹ್ಲಿಯನ್ನು ಭೇಟಿಯಾಗಲು ಆಗಮಿಸಿದ್ದ ರಿಂಕು ಸಿಂಗ್ ಕೆಲ ಹೊತ್ತು ಕುಶಲೋಪರಿ ನಡೆಸಿದರು. ಅಲ್ಲದೆ ಕಿಂಗ್ ಕೊಹ್ಲಿ ಕಡೆಯಿಂದ ಬ್ಯಾಟಿಂಗ್ ಸಲಹೆಗಳನ್ನು ಪಡೆದುಕೊಂಡರು. ಇದೇ ವೇಳೆ ಯುವ ಎಡಗೈ ದಾಂಡಿಗನಿಗೆ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿದ್ದಾರೆ.
3 / 5
ಮಾತುಕತೆ ಮುಗಿಸಿ ಇನ್ನೇನು ಹೊರಡುವಷ್ಟರಲ್ಲಿ ರಿಂಕು ಸಿಂಗ್ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಕಿಂಗ್ ಕೊಹ್ಲಿ ಬಳಸುವುದು ಉತ್ಕೃಷ್ಟ ಗುಣಮಟ್ಟದ ಬ್ಯಾಟ್. ಹೀಗಾಗಿಯೇ ಅನೇಕ ಆಟಗಾರರು ಕಿಂಗ್ ಕೊಹ್ಲಿಯಿಂದ ಬ್ಯಾಟ್ ಅನ್ನು ಕೇಳಿ ಪಡೆಯುತ್ತಾರೆ. ಇದೀಗ ಕಿಂಗ್ ಕೊಹ್ಲಿ ರಿಂಕು ಸಿಂಗ್ಗೆ ತಮ್ಮ ಬ್ಯಾಟ್ ಅನ್ನು ಗಿಫ್ಟ್ ಆಗಿ ನೀಡಿದ್ದು, ಇದರ ಫೋಟೋಗಳನ್ನು ಕೆಕೆಆರ್ ಫ್ರಾಂಚೈಸಿಯು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
4 / 5
ಅಲ್ಲದೆ ಆರ್ಸಿಬಿ ತಂಡದ ಡ್ರೆಸ್ಸಿಂಗ್ ರೂಮ್ನಿಂದ ಹೊರಡುವ ಮುನ್ನ ವಿರಾಟ್ ಕೊಹ್ಲಿಯಿಂದ ರಿಂಕು ಸಿಂಗ್ ಅದೃಷ್ಟದ ಅಪ್ಪುಗೆಯನ್ನು ಸಹ ಪಡೆದರು. ಇದೀಗ ರಿಂಕು-ಕೊಹ್ಲಿ ನಡುವಣ ಬಾಂಧವ್ಯದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
5 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ ಆರ್ಸಿಬಿ ಪಡೆ.