IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ವೊಂದರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಐಪಿಎಲ್ 2016 ರಲ್ಲಿ ಬರೋಬ್ಬರಿ 973 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ಸಾರ್ವಕಾಲಿಕ ದಾಖಲೆ ಮುರಿಯಲು ಕಿಂಗ್ ಕೊಹ್ಲಿಗೆ ಕೇವಲ 266 ರನ್ಗಳ ಅವಶ್ಯಕತೆಯಿದೆ.