IPL 2024: ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ ಆಂಧ್ರಕ್ಕೆ ಶಿಫ್ಟ್: CSK ತಂಡಕ್ಕೆ ಪ್ಲಸ್ ಪಾಯಿಂಟ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​ 2024) 11ನೇ ಪಂದ್ಯವು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಭಾನುವಾರ (ಮಾ.31) ನಡೆಯಲಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿರುವುದು ವಿಶೇಷ. ಅಂದರೆ ಈ ಮೈದಾನವು ಉಭಯ ತಂಡಗಳಿಗೂ ತವರು ಮೈದಾನವಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on:Mar 31, 2024 | 8:53 AM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 13ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಬೇಕಿದ್ದ ಈ ಪಂದ್ಯಕ್ಕೆ ಆಂಧ್ರಪ್ರದೇಶದ ವಿಖಾಖಪಟ್ಟಣಂದಲ್ಲಿರುವ ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

1 / 7
ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ತವರು ಮೈದಾನವಾಗಿ ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂ ಅನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಈ ಮೈದಾನದಲ್ಲಿ ರಿಷಭ್ ಪಂತ್ ಪಡೆ ಸಿಎಸ್​ಕೆ ಹಾಗೂ ಕೆಕೆಆರ್ ವಿರುದ್ಧ 2 ಪಂದ್ಯಗಳನ್ನಾಡಲಿದೆ.

2 / 7
ಪಂದ್ಯ ಶಿಫ್ಟ್ ಯಾಕೆ?: ಈ ಪಂದ್ಯಗಳು ಡೆಲ್ಲಿ ಕ್ಯಾಪಿಟಲ್ಸ್ ತಂಡದ ತವರು ಮೈದಾನ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಬೇಕಿತ್ತು. ಆದರೆ ಇತ್ತೀಚೆಗೆ ಇದೇ ಮೈದಾನದಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ ಅನ್ನು ಆಯೋಜಿಸಲಾಗಿತ್ತು. ನಾಕೌಟ್ ಪಂದ್ಯಗಳು ಸೇರಿದಂತೆ ವುಮೆನ್ಸ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯಕ್ಕೆ ಈ ಸ್ಟೇಡಿಯಂ ಆತಿಥ್ಯವಹಿಸಿತ್ತು.

3 / 7
ಇತ್ತ ಐಪಿಎಲ್ ಪಂದ್ಯಗಳಿಗೆ ಕ್ರೀಡಾಂಗಣವು ಸಂಪೂರ್ಣ ಸಿದ್ಧವಾಗಿಲ್ಲ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬದಲಿ ಮೈದಾನವನ್ನು ಆಯ್ಕೆ ಮಾಡುವಂತೆ ಬಿಸಿಸಿಐ ಸೂಚಿಸಿದೆ. ಅದರಂತೆ ಪುಣೆ, ವಿಶಾಖಪಟ್ಟಣಂ ಮತ್ತು ಕಟಕ್ ಮೈದಾನಗಳ ಆಯ್ಕೆಗಳನ್ನು ಹೊಂದಿದ್ದ ಡೆಲ್ಲಿ ಕ್ಯಾಪಿಟಲ್ಸ್ ಅಂತಿಮವಾಗಿ ದಕ್ಷಿಣ ಭಾರತದ ಸ್ಟೇಡಿಯಂ ಅನ್ನು ಆಯ್ಕೆ ಮಾಡಿಕೊಂಡಿದೆ.

4 / 7
ಅದರಂತೆ ವಿಖಾಖಪಟ್ಟಣಂದಲ್ಲಿರುವ ವೈಎಸ್ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ರಿಷಭ್ ಪಂತ್ ಪಡೆ 2 ಪಂದ್ಯಗಳನ್ನಾಡಲಿದೆ. ಇನ್ನು ಏಪ್ರಿಲ್ 20 ರಂದು ನಡೆಯುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ದೆಹಲಿಯಲ್ಲಿ ಮೊದಲ ಮ್ಯಾಚ್​ ಆಡಲಿದೆ.

5 / 7
ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ದಕ್ಷಿಣ ಭಾರತದ ಮೈದಾನವನ್ನು ತವರು ಮೈದಾನವಾಗಿ ಆಯ್ಕೆ ಮಾಡಿಕೊಂಡಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಸೌತ್ ಇಂಡಿಯಾದಲ್ಲಿ ಸಿಎಸ್​ಕೆ ತಂಡಕ್ಕೆ ಅಪಾರ ಅಭಿಮಾನಿಗಳಿದ್ದು, ಅದರಲ್ಲೂ ಆಂಧ್ರದಲ್ಲಿ ಧೋನಿಗೆ ಫ್ಯಾನ್ಸ್​ ಬಳಗವೇ ಇದೆ.

6 / 7
ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಸಿಎಸ್​ಕೆ ಅಭಿಮಾನಿಗಳು ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಲಿದ್ದಾರೆ. ಅಲ್ಲದೆ ಅಭಿಮಾನಿಗಳ ಭರಪೂರ ಬೆಂಬಲದೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ತವರು ಮೈದಾನದಲ್ಲಿ ಆಡುತ್ತಿರುವ ಅನುಭವ ಸಿಗಲಿರುವುದಂತು ದಿಟ.

7 / 7

Published On - 8:52 am, Sun, 31 March 24

Follow us
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ