- Kannada News Photo gallery Cricket photos IPL 2024: Why Hardik Pandya Selected For T20 World Cup 2024
Hardik Pandya: ಹಾರ್ದಿಕ್ ಪಾಂಡ್ಯ ಆಯ್ಕೆಗೆ ಮಾನದಂಡವೇನು?
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17ರ ಪ್ರದರ್ಶನದ ಆಧಾರದ ಮೇಲೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಿರುವುದು ಸ್ಪಷ್ಟ. ಇದಕ್ಕೆ ಸಾಕ್ಷಿ ಸಂಜು ಸ್ಯಾಮ್ಸನ್, ರಿಷಭ್ ಪಂತ್ ಹಾಗೂ ಶಿವಂ ದುಬೆಗೆ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿರುವುದು. ಆದರೆ ಇದೇ ಐಪಿಎಲ್ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಹಾರ್ದಿಕ್ ಪಾಂಡ್ಯರನ್ನು ಯಾವ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ?
Updated on:May 01, 2024 | 2:38 PM

T20 World Cup 2024: ಟಿ20 ವಿಶ್ವಕಪ್ಗಾಗಿ 15 ಸದಸ್ಯರ ಭಾರತ ತಂಡವನ್ನು ಘೋಷಿಸಲಾಗಿದೆ. ಈ ತಂಡದ ನಾಯಕನಾಗಿ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಂಡರೆ, ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ (Hardik Pandya) ಆಯ್ಕೆಯಾಗಿದ್ದಾರೆ. ಅಚ್ಚರಿ ಎಂದರೆ ಕಳಪೆ ಫಾರ್ಮ್ನಲ್ಲಿರುವ ಪಾಂಡ್ಯ ಈ ಬಾರಿಯ ಟಿ20 ವಿಶ್ವಕಪ್ಗೆ ಆಯ್ಕೆಯಾಗುವುದು ಡೌಟ್ ಎನ್ನಲಾಗಿತ್ತು.

ಆದರೆ ಉಪನಾಯಕನ ಸ್ಥಾನದೊಂದಿಗೆ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಪಾಂಡ್ಯ ಆಯ್ಕೆಗೆ ಮಾನದಂಡವೇನು? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಮುಂಬೈ ಇಂಡಿಯನ್ಸ್ ತಂಡದ ನಾಯಕ ಕಳಪೆ ಫಾರ್ಮ್ನಲ್ಲಿರುವುದು.

ಈ ಹಿಂದೆ ಏಕದಿನ ವಿಶ್ವಕಪ್ ವೇಳೆ ಗಾಯಗೊಂಡು ಅರ್ಧದಲ್ಲೇ ಟೂರ್ನಿ ತೊರೆದಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್ ಮೂಲಕ ಮತ್ತೆ ಮೈದಾನಕ್ಕಿಳಿದಿದ್ದರು. ಇದರ ನಡುವೆ ಯಾವುದೇ ಸ್ಪರ್ಧಾತ್ಮಕ ಪಂದ್ಯವಾಡಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

ಇನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್ನಲ್ಲಿ ನೀಡಿರುವ ಪ್ರದರ್ಶನ ಕೂಡ ಅಷ್ಟಕಷ್ಟೇ. ಅಂದರೆ ಈವರೆಗೆ 10 ಪಂದ್ಯಗಳನ್ನಾಡಿರುವ ಪಾಂಡ್ಯ 131 ಎಸೆತಗಳನ್ನು ಎದುರಿಸಿ ಕಲೆಹಾಕಿರುವುದು ಕೇವಲ 197 ರನ್ಗಳು ಮಾತ್ರ.

ಮತ್ತೊಂದೆಡೆ ಪರಿಪೂರ್ಣ ಆಲ್ರೌಂಡರ್ ಆಗಿಯೂ ಕಾಣಿಸಿಕೊಂಡಿಲ್ಲ. ಅಂದರೆ 10 ಪಂದ್ಯಗಳಲ್ಲಿ ಪಾಂಡ್ಯ ಎಸೆದಿರುವುದು ಕೇವಲ 23 ಓವರ್ಗಳನ್ನು ಮಾತ್ರ. ಈ ವೇಳೆ 253 ರನ್ಗಳನ್ನು ನೀಡಿ ಕೇವಲ 6 ವಿಕೆಟ್ ಪಡೆದಿದ್ದಾರೆ.

ಅಂದರೆ ಬ್ಯಾಟಿಂಗ್ನಲ್ಲಿ ಕೇವಲ 21ರ ಸರಾಸರಿಯಲ್ಲಿ ರನ್ ಕಲೆಹಾಕಿರುವ ಹಾರ್ದಿಕ್ ಪಾಂಡ್ಯ, ಬೌಲಿಂಗ್ನಲ್ಲಿ ಪ್ರತಿ ಓವರ್ಗೆ 11 ರನ್ಗಳನ್ನು ಬಿಟ್ಟು ಕೊಟ್ಟಿದ್ದಾರೆ. ಇಂತಹ ಕಳಪೆ ಫಾರ್ಮ್ನಲ್ಲಿರುವ ಆಟಗಾರನನ್ನು ವಿಶ್ವಕಪ್ ಟೂರ್ನಿಗೆ ಯಾವ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ ಎಂಬುದೇ ಈಗ ಟೀಮ್ ಇಂಡಿಯಾ ಅಭಿಮಾನಿಗಳ ಪ್ರಶ್ನೆ.

ಟಿ20 ವಿಶ್ವಕಪ್ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ. ||| ಮೀಸಲು ಆಟಗಾರರು: ಶುಭ್ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.
Published On - 2:38 pm, Wed, 1 May 24
