Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ವಿಲ್ ಜಾಕ್ಸ್​ ಸಿಡಿಲಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 45ನೇ ಪಂದ್ಯದಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬೌಲಿಂಗ್ ಮಾಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್​ಗಳಲ್ಲಿ 200 ರನ್​ ಕಲೆಹಾಕಿತು. ಈ ಗುರಿಯನ್ನು 16 ಓವರ್​ಗಳಲ್ಲಿ ಬೆನ್ನಟ್ಟುವ ಮೂಲಕ ಆರ್​ಸಿಬಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 29, 2024 | 8:03 AM

ಐಪಿಎಲ್​ನ (IPL 2024) 45ನೇ ಪಂದ್ಯವು ಸ್ಪೋಟಕ ಸೆಂಚುರಿಗೆ ಸಾಕ್ಷಿಯಾಗಿದೆ. ಹೀಗೆ ಕ್ಷಣಾರ್ಧದಲ್ಲೇ ಸೆಂಚುರಿ ಸಿಡಿಸಿ ಅಬ್ಬರಿಸಿದ್ದು ಮತ್ಯಾರೂ ಅಲ್ಲ, ಆರ್​ಸಿಬಿ ತಂಡದ ದಾಂಡಿಗ ವಿಲ್ ಜಾಕ್ಸ್ (Will Jacks). ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜಾಕ್ಸ್ ಅರ್ಧಶತಕ ಪೂರೈಸಲು ಬರೋಬ್ಬರಿ 31 ಎಸೆತಗಳನ್ನು ತೆಗೆದುಕೊಂಡಿದ್ದರು.

1 / 5
ಆದರೆ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸಲು ತೆಗೆದುಕೊಂಡಿದ್ದು ಕೇವಲ 10 ಎಸೆತಗಳು ಮಾತ್ರ. ಅಂದರೆ 31 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರೆ, ಮುಂದಿನ 10 ಎಸೆತಗಳಲ್ಲಿ 50 ರನ್ ಬಾರಿಸಿ ಶತಕ ಪೂರೈಸಿದರು. ಇದರೊಂದಿಗೆ ಐಪಿಎಲ್​ನ ವಿಶೇಷ ದಾಖಲೆಯೊಂದು ವಿಲ್ ಜಾಕ್ಸ್ ಪಾಲಾಯಿತು.

2 / 5
ಐಪಿಎಲ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. 2013 ರಲ್ಲಿ ಪುಣೆ ವಾರಿಯರ್ಸ್ ವಿರುದ್ಧ 17 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ಗೇಲ್, ಮುಂದಿನ 13 ಎಸೆತಗಳಲ್ಲಿ 50 ರನ್ ಬಾರಿಸುವ ಮೂಲಕ ಶತಕ ಪೂರೈಸಿದ್ದರು. ಅಂದರೆ ಕೇವಲ 13 ಎಸೆತಗಳ ಮೂಲಕ ಗೇಲ್ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸಿ ದಾಖಲೆ ಬರೆದಿದ್ದರು.

3 / 5
ಇದೀಗ ವಿಲ್ ಜಾಕ್ಸ್ ಸಿಡಿಲಬ್ಬರಕ್ಕೆ ಈ ದಾಖಲೆ ಉಡೀಸ್ ಆಗಿದೆ. ಅರ್ಧಶತಕದ ಬಳಿಕ ಸಿಕ್ಸ್, ಎರಡು ರನ್, ಸಿಕ್ಸ್, ಫೋರ್, ಡಾಟ್, ಸಿಕ್ಸ್, ಸಿಕ್ಸ್, ಫೋರ್, ಸಿಕ್ಸ್ ಮತ್ತು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಜಾಕ್ಸ್ ಕೇವಲ 10 ಎಸೆತಗಳಲ್ಲಿ ಹಾಫ್ ಸೆಂಚುರಿಯನ್ನು ಶತಕವನ್ನಾಗಿ ಪರಿವರ್ತಿಸಿದ್ದಾರೆ.

4 / 5
ಈ ಮೂಲಕ ಕಳೆದ ಒಂದು ದಶಕದಿಂದ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ವಿಲ್ ಜಾಕ್ಸ್ ಮುರಿದಿದ್ದಾರೆ. ಅಲ್ಲದೆ ಐಪಿಎಲ್ ಇತಿಹಾಸದಲ್ಲಿ ಅರ್ಧಶತಕದ ಬಳಿಕ ಅತೀ ವೇಗವಾಗಿ ಶತಕ ಪೂರೈಸಿದ ಭರ್ಜರಿ ದಾಖಲೆಯನ್ನು ಆರ್​ಸಿಬಿ ತಂಡದ ಸ್ಪೋಟಕ ದಾಂಡಿಗ ವಿಲ್ ಜಾಕ್ಸ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
Follow us
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ

ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ

ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು

ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್

ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು

ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ

ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು

ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್

ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್

ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ