AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ದಾಖಲೆಗಳ ಮೇಲೆ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

IPL 2024: ಐಪಿಎಲ್ 2024ರ 38ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 60 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 104 ರನ್ ಬಾರಿಸಿ ಮಿಂಚಿದ್ದಾರೆ. ಈ ಭರ್ಜರಿ ಸೆಂಚುರಿಯೊಂದಿಗೆ ಯುವ ಎಡಗೈ ದಾಂಡಿಗ ಐಪಿಎಲ್​ನಲ್ಲಿ ಹಲವು ದಾಖಲೆಗಳನ್ನು ಕೂಡ ನಿರ್ಮಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 23, 2024 | 3:52 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 38ನೇ ಪಂದ್ಯದಲ್ಲಿ ಸೆಂಚುರಿ ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್ (Yashasvi Jaiswal) ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ತಮ್ಮ 22ನೇ ವಯಸ್ಸಿನಲ್ಲಿ ಎಂಬುದು ವಿಶೇಷ.

1 / 6
ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 179 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ ಸ್ಪೋಟಕ ಆರಂಭ ಒದಗಿಸಿದ್ದರು.

2 / 6
ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಜೈಸ್ವಾಲ್ ಮುಂಬೈ ಇಂಡಿಯನ್ಸ್ ಬೌಲರ್​ಗಳ ಬೆಂಡೆತ್ತಿದರು. ಅಲ್ಲದೆ ಕೇವಲ 59 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಅಜೇಯ ಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವು 18.4 ಓವರ್​ಗಳಲ್ಲಿ ಗುರಿ ತಲುಪಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

3 / 6
ವಿಶೇಷ ಎಂದರೆ ಈ ಶತಕದೊಂದಿಗೆ ಯಶಸ್ವಿ ಜೈಸ್ವಾಲ್ ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಅಂದರೆ ಐಪಿಎಲ್ ಇತಿಹಾಸದಲ್ಲಿ 23 ವರ್ಷದೊಳಗೆ 2 ಶತಕ ಸಿಡಿಸಿದ ಏಕೈಕ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 2022 ರಲ್ಲಿ ಜೈಸ್ವಾಲ್ ಸೆಂಚುರಿ ಸಿಡಿಸಿ ಮಿಂಚಿದ್ದರು. ಇದೀಗ ತಮ್ಮ 22ನೇ ವಯಸ್ಸಿನಲ್ಲಿ ಮತ್ತೊಂದು ಶತಕ ಬಾರಿಸಿದ್ದಾರೆ.

4 / 6
ಹಾಗೆಯೇ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 2 ಶತಕ ಬಾರಿಸಿದ 2ನೇ ಆಟಗಾರ ಎಂಬ ಹೆಗ್ಗಳಿಕೆಗೂ ಜೈಸ್ವಾಲ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಕೆಎಲ್ ರಾಹುಲ್ ಈ ಸಾಧನೆ ಮಾಡಿದ್ದಾರೆ. 2022 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧವೇ 124 ರನ್ ಬಾರಿಸಿ ಅಬ್ಬರಿಸಿದ ಯಶಸ್ವಿ ಇದೀಗ ಮತ್ತೊಮ್ಮೆ ಶತಕ ಸಿಡಿಸಿ ಈ ಸಾಧನೆ ಮಾಡಿದ್ದಾರೆ.

5 / 6
ಹಾಗೆಯೇ ಐಪಿಎಲ್​ನಲ್ಲಿ ಒಂದೇ ತಂಡದ ವಿರುದ್ಧ 2 ಶತಕ ಸಿಡಿಸಿದ 6ನೇ ಬ್ಯಾಟರ್ ಎಂಬ ದಾಖಲೆಯನ್ನೂ ಸಹ ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಡೇವಿಡ್ ವಾರ್ನರ್, ಜೋಸ್ ಬಟ್ಲರ್ ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ 22ನೇ ವಯಸ್ಸಿನಲ್ಲಿಯೇ ಯಶಸ್ವಿ ಜೈಸ್ವಾಲ್ ಈ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

6 / 6
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ