ಹಾಗೆಯೇ ಐಪಿಎಲ್ನಲ್ಲಿ ಒಂದೇ ತಂಡದ ವಿರುದ್ಧ 2 ಶತಕ ಸಿಡಿಸಿದ 6ನೇ ಬ್ಯಾಟರ್ ಎಂಬ ದಾಖಲೆಯನ್ನೂ ಸಹ ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಡೇವಿಡ್ ವಾರ್ನರ್, ಜೋಸ್ ಬಟ್ಲರ್ ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ 22ನೇ ವಯಸ್ಸಿನಲ್ಲಿಯೇ ಯಶಸ್ವಿ ಜೈಸ್ವಾಲ್ ಈ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.