AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಖದರ್ ಕಳೆದುಕೊಂಡ ಯಶಸ್ವಿ ಜೈಸ್ವಾಲ್​..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಯಶಸ್ವಿ ಜೈಸ್ವಾಲ್ ಕಳಪೆ ಬ್ಯಾಟಿಂಗ್ ಮುಂದುವರೆಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 10 ರನ್ ಬಾರಿಸಿ ಔಟಾಗಿದ್ದ ಜೈಸ್ವಾಲ್, ಆ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ರನ್, ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ತಲಾ 24 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದರು. ಇನ್ನು ಆರ್​ಸಿಬಿ ವಿರುದ್ಧ ಶೂನ್ಯಕ್ಕೆ ಔಟಾಗಿದ್ದರು.

TV9 Web
| Edited By: |

Updated on: Apr 13, 2024 | 2:24 PM

Share
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತೀ ವೇಗದ ಅರ್ಧಶತಕ ಬಾರಿಸಿದ ಬ್ಯಾಟರ್... ಬಲಿಷ್ಠ ಇಂಗ್ಲೆಂಡ್​ ಪಡೆಗೆ ಜೈಸ್​ಬಾಲ್ ತೋರಿಸಿದ ಯುವ ದಾಂಡಿಗ... ಪ್ರಸ್ತುತ ಕ್ರಿಕೆಟ್​ ಅಂಗಳದ ಆಕ್ರಮಣಕಾರಿ ಎಡಗೈ ಬ್ಯಾಟ್ಸ್​ಮನ್... ಹೀಗೆ ಕಳೆದೊಂದು ವರ್ಷದಿಂದ ಸಂಚಲನ ಸೃಷ್ಟಿಸಿದ್ದ ಯಶಸ್ವಿ ಜೈಸ್ವಾಲ್ (Yashasvi Jaiswal) ಈ ಬಾರಿಯ ಐಪಿಎಲ್​ನಲ್ಲಿ ಮಂಕಾಗಿದ್ದಾರೆ.

1 / 6
ಕಳೆದ ಸೀಸನ್ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ 14 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್​ 5 ಅರ್ಧಶತಕ ಹಾಗೂ 1 ಶತಕದೊಂದಿಗೆ ಕಲೆಹಾಕಿದ್ದು ಬರೋಬ್ಬರಿ 625 ರನ್​ಗಳು. ಆದರೆ ಈ ಬಾರಿ ಜೈಸ್ವಾಲ್​ಗೆ 50 ಎಸೆತಗಳನ್ನು ಎದುರಿಸಲು ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ.

2 / 6
ಐಪಿಎಲ್​ 2024 ರ ಮೊದಲಾರ್ಧದ 5 ಪಂದ್ಯಗಳಲ್ಲಿ ಯಶಸ್ವಿ ಜೈಸ್ವಾಲ್ ಎದುರಿಸಿರುವುದು ಕೇವಲ 46 ಎಸೆತಗಳನ್ನು ಮಾತ್ರ. ಈ ವೇಳೆ ಕೇವಲ 63 ರನ್​ ಕಲೆಹಾಕಿದ್ದಾರೆ. ಅಲ್ಲದೆ ಪ್ರತಿ ಬಾರಿಯೂ ಪವರ್​ಪ್ಲೇನಲ್ಲೇ ವಿಕೆಟ್ ಒಪ್ಪಿಸಿದ್ದಾರೆ.

3 / 6
ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಜೈಸ್ವಾಲ್ ಇದುವರೆಗೆ 12.60 ಸರಾಸರಿಯಲ್ಲಿ ಮಾತ್ರ ರನ್​ ಕಲೆಹಾಕಿದ್ದಾರೆ. ಹಾಗೆಯೇ ಅವರ ಸ್ಟ್ರೈಕ್ ರೇಟ್ 136.96 ಕ್ಕೆ ಕುಸಿದಿದೆ. ಕಳೆದ ಸೀಸನ್​ನಲ್ಲಿ ಜೈಸ್ವಾಲ್ 163.61 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

4 / 6
ಇದೀಗ ಫಾರ್ಮ್​ ಕಳೆದುಕೊಂಡಿರುವ ಯಶಸ್ವಿ ಜೈಸ್ವಾಲ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಉತ್ತಮ ಆರಂಭ ಒದಗಿಸಲು ವಿಫಲರಾಗುತ್ತಿದ್ದಾರೆ. ಟಿ20 ವಿಶ್ವಕಪ್​ಗೂ ಮುನ್ನ ಕಳಪೆ ಪ್ರದರ್ಶನ ನೀಡುತ್ತಿರುವ ಜೈಸ್ವಾಲ್​ಗೆ ಭಾರತ ಟಿ20 ತಂಡದಲ್ಲಿ ಸ್ಥಾನ ಸಿಗಲಿದೆಯಾ ಎಂಬುದೇ ಈಗ ದೊಡ್ಡ ಪ್ರಶ್ನೆ.

5 / 6
ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಯಶಸ್ವಿ ಜೈಸ್ವಾಲ್​ ಮುಂದೆ 9 ಪಂದ್ಯಗಳಿವೆ. ಈ ಪಂದ್ಯಗಳಲ್ಲಿ ಭರ್ಜರಿ ಬ್ಯಾಟಿಂಗ್​ನೊಂದಿಗೆ ತಮ್ಮ ಫಾರ್ಮ್ ಅನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾದರೆ ಟಿ20 ವಿಶ್ವಕಪ್​ ತಂಡದಲ್ಲಿ ಕಾಣಿಸಿಕೊಳ್ಳಬಹುದು. ಇಲ್ಲದಿದ್ದರೆ ರೋಹಿತ್ ಶರ್ಮಾ ಜೊತೆ ಇಶಾನ್ ಕಿಶನ್ ಅಥವಾ ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

6 / 6
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ

ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ

ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ

ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್

ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ

ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!

ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ

ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ

ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ; ಪರಮೇಶ್ವರ್ ಹೇಳಿದ್ದೇನು?

2 ವರ್ಷಗಳ ಬಳಿಕ ಏಕದಿನ ಪಂದ್ಯ ಗೆದ್ದ ಇಂಗ್ಲೆಂಡ್!