IPL 2024: ಬರೋಬ್ಬರಿ 200 ಸಿಕ್ಸ್: ಹೀಗೊಂದು ದಾಖಲೆ ಬರೆದ ಚಹಲ್..!
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಇತಿಹಾಸದಲ್ಲಿ 200 ವಿಕೆಟ್ ಪಡೆದ ದಾಖಲೆ ಬರೆಯಲು ಯುಜ್ವೇಂದ್ರ ಚಹಲ್ಗೆ ಬೇಕಿರುವುದು ಕೇವಲ 2 ವಿಕೆಟ್ಗಳು ಮಾತ್ರ. ಈ ಬಾರಿಯ ಐಪಿಎಲ್ ಮೂಲಕ ಚಹಲ್ ಈ ವಿಶೇಷ ದಾಖಲೆ ಬರೆಯುವ ವಿಶ್ವಾಸದಲ್ಲಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 200 ವಿಕೆಟ್ ಪಡೆದ ಮೊದಲ ಬೌಲರ್ ಎನಿಸಿಕೊಳ್ಳಲಿದ್ದಾರೆ.
Updated on: Apr 14, 2024 | 8:07 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಹೊಂದಿರುವ ಯುಜ್ವೇಂದ್ರ ಚಹಲ್ (Yuzvendra Chahal) ಇದೀಗ ಅನಗತ್ಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಸಿಕ್ಸ್ ಚಚ್ಚಿಸಿಕೊಳ್ಳುವ ಮೂಲಕ ಎಂಬುದು ವಿಶೇಷ.

ಅಂದರೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಸಿಕ್ಸ್ ಹೊಡೆಸಿಕೊಂಡ ಬೌಲರ್ಗಳ ಪಟ್ಟಿಯಲ್ಲಿ ಇದೀಗ ಯುಜ್ವೇಂದ್ರ ಚಹಲ್ 2ನೇ ಸ್ಥಾನಕ್ಕೇರಿದ್ದಾರೆ. 150 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಚಹಲ್ ಇದುವರೆಗೆ 200 ಸಿಕ್ಸ್ಗಳನ್ನು ಚಚ್ಚಿಸಿಕೊಂಡಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 200 ಸಿಕ್ಸ್ ಹೊಡೆಸಿಕೊಂಡ 2ನೇ ಬೌಲರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಇಂತಹದೊಂದು ಕಳಪೆ ದಾಖಲೆ ಬರೆದಿದ್ದು ಪಿಯೂಷ್ ಚಾವ್ಲಾ. 184 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಚಾವ್ಲಾ ಇದುವರೆಗೆ 211 ಸಿಕ್ಸ್ಗಳನ್ನು ಹೊಡೆಸಿಕೊಂಡಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತೀ ಹೆಚ್ಚು ಸಿಕ್ಸ್ ನೀಡಿದ ಬೌಲರ್ ಎಂಬ ಅನಗತ್ಯ ದಾಖಲೆಯನ್ನು ಬರೆದಿದ್ದಾರೆ.

ಇದೀಗ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 2 ಸಿಕ್ಸ್ಗಳನ್ನು ನೀಡುವ ಮೂಲಕ ಯುಜ್ವೇಂದ್ರ ಚಹಲ್ 200 ಸಿಕ್ಸ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಅತ್ಯಧಿಕ ಸಿಕ್ಸ್ ಹೊಡೆಸಿಕೊಂಡ ಬೌಲರ್ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

ಇದಾಗ್ಯೂ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಅಗ್ರಸ್ಥಾನದಲ್ಲಿದ್ದಾರೆ. ಇದುವರೆಗೆ 3305 ಎಸೆತಗಳನ್ನು ಎಸೆದಿರುವ ಚಹಲ್ ಒಟ್ಟು 198 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 200 ವಿಕೆಟ್ ಪಡೆದ ದಾಖಲೆ ಬರೆಯುವ ಹೊಸ್ತಿಲಲ್ಲಿದ್ದಾರೆ.
