Yuzvendra Chahal: ಚಹಲ್ ಕಮಾಲ್: ಹೊಸ ದಾಖಲೆ ನಿರ್ಮಾಣ
TV9 Web | Updated By: ಝಾಹಿರ್ ಯೂಸುಫ್
Updated on:
May 08, 2024 | 9:02 AM
IPL 2024: ಐಪಿಎಲ್ 2024 ರಲ್ಲಿ ಉತ್ತಮ ಪ್ರದರ್ಶನ ಮುಂದುವರೆಸಿರುವ ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್ನಲ್ಲಿ 350 ವಿಕೆಟ್ಗಳ ಮೈಲುಗಲ್ಲನ್ನು ಮುಟ್ಟುವ ಮೂಲಕ ಎಂಬುದು ವಿಶೇಷ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.
1 / 5
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ (IPL 2024) 56ನೇ ಪಂದ್ಯದ ಮೂಲಕ ಯುಜ್ವೇಂದ್ರ ಚಹಲ್ (Yuzvendra Chahal) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ 4 ಓವರ್ಗಳನ್ನು ಬೌಲಿಂಗ್ ಮಾಡಿದ್ದ ಚಹಲ್ 48 ರನ್ ನೀಡಿ ಕೇವಲ 1 ವಿಕೆಟ್ ಪಡೆದಿದ್ದರು.
2 / 5
ಈ ಒಂದು ವಿಕೆಟ್ನೊಂದಿಗೆ ಯುಜ್ವೇಂದ್ರ ಚಹಲ್ ಟಿ20 ಕ್ರಿಕೆಟ್ನಲ್ಲಿ 350 ವಿಕೆಟ್ಗಳನ್ನು ಪಡೆದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ. ಅಲ್ಲದೆ ಚುಟುಕು ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವದ 11ನೇ ಬೌಲರ್ ಎಂಬ ದಾಖಲೆ ಬರೆದಿದ್ದಾರೆ.
3 / 5
ಯುಜ್ವೇಂದ್ರ ಚಹಲ್ ಟಿ20 ಕ್ರಿಕೆಟ್ನಲ್ಲಿ ಈವರೆಗೆ ಒಟ್ಟು 297 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 6449 ಎಸೆತಗಳನ್ನು ಎಸೆದು ಒಟ್ಟು 350 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 350 ವಿಕೆಟ್ಗಳ ಮೈಲುಗಲ್ಲು ದಾಟಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.
4 / 5
ಹಾಗೆಯೇ ಐಪಿಎಲ್ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎಂಬ ದಾಖಲೆ ಕೂಡ ಚಹಲ್ ಹೆಸರಿನಲ್ಲಿದೆ. ಯುಜ್ವೇಂದ್ರ ಚಹಲ್ ಈವರೆಗೆ 155 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದು, ಈ ವೇಳೆ ಎಸೆದ 3425 ಎಸೆತಗಳಲ್ಲಿ 201 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
5 / 5
ಇನ್ನು ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್ನ ಡ್ವೇನ್ ಬ್ರಾವೊ ಹೆಸರಿನಲ್ಲಿದೆ. 539 ಇನಿಂಗ್ಸ್ಗಳಲ್ಲಿ ಒಟ್ಟು 11048 ಎಸೆತಗಳನ್ನು ಎಸೆದಿರುವ ಬ್ರಾವೊ 625 ವಿಕೆಟ್ ಕಬಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.