- TV9 Kannada Kannada News Photos Cricket Photos IPL 2024 kl rahul completes 4000 runs as a opener in ipl
IPL 2024: ಆರಂಭಿಕನಾಗಿ ವಿಶೇಷ ಮೈಲಿಗಲ್ಲು ದಾಟಿದ ಕನ್ನಡಿಗ ಕೆಎಲ್ ರಾಹುಲ್..!
IPL 2024: ಲಕ್ನೋ ತಂಡದ ಪರ ನಾಯಕ ಕೆಎಲ್ ರಾಹುಲ್ 48 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 76 ರನ್ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಇದರೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸಾರ್ವಕಾಲಿಕ ದಾಖಲೆ ಕೂಡ ನಿರ್ಮಿಸಿದರು.
Updated on: Apr 27, 2024 | 10:20 PM

ಲಕ್ನೋದ ಅಟಲ್ ವಿಹಾರಿ ವಾಜಪೇಯಿ ಐಕಾನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 197 ರನ್ಗಳ ಗುರಿ ನೀಡಿದೆ.

ಲಕ್ನೋ ತಂಡದ ಪರ ನಾಯಕ ಕೆಎಲ್ ರಾಹುಲ್ 48 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 76 ರನ್ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಇದರೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸಾರ್ವಕಾಲಿಕ ದಾಖಲೆ ಕೂಡ ನಿರ್ಮಿಸಿದರು.

ವಾಸ್ತವವಾಗಿ ಈ ಪಂದ್ಯದಲ್ಲಿ 35 ರನ್ ಪೂರೈಸಿದ ಕೂಡಲೇ ರಾಹುಲ್ ಐಪಿಎಲ್ನಲ್ಲಿ ಆರಂಭಿಕರಾಗಿ 4000 ರನ್ ಪೂರೈಸಿದರು. ಇದರೊಂದಿಗೆ ಆರಂಭಿಕನಾಗಿ ಐಪಿಎಲ್ನಲ್ಲಿ ಈ ಸಾಧನೆ ಮಾಡಿದ ಐದನೇ ಆಟಗಾರ ಹಾಗೂ ಅತಿ ಕಡಿಮೆ ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ ಮೊದಲ ಆರಂಭಿಕ ಎನಿಸಿಕೊಂಡಿದ್ದಾರೆ.

ರಾಜಸ್ಥಾನ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ 4000 ರನ್ ಪೂರೈಸಲು ರಾಹುಲ್ ಕೇವಲ 94 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ. ರಾಹುಲ್ಗೂ ಮುನ್ನ ಇಬ್ಬರು ಭಾರತೀಯರು ಹಾಗೂ ಇಬ್ಬರು ವಿದೇಶಿ ಆಟಗಾರರು ಆರಂಭಿಕರಾಗಿ 4000 ರನ್ಗಳ ಗಡಿ ದಾಟಿದ್ದಾರೆ.

ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಆರಂಭಿಕನಾಗಿ ಇದುವರೆಗೆ 6362 ರನ್ ಕಲೆಹಾಕಿದ್ದಾರೆ. ಎರಡನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮಾಜಿ ನಾಯಕ ಡೇವಿಡ್ ವಾರ್ನರ್ 5909 ರನ್ ಬಾರಿಸಿದ್ದಾರೆ.

ಮೂರನೇ ಸ್ಥಾನದಲ್ಲಿರುವ ಮಾಜಿ ಆರ್ಸಿಬಿ ಆಟಗಾರ ಕ್ರಿಸ್ ಗೇಲ್ ಐಪಿಎಲ್ನಲ್ಲಿ ಆರಂಭಿಕನಾಗಿ 4480 ರನ್ ಬಾರಿಸಿದ್ದರೆ, ಮತ್ತೊಬ್ಬ ಆರ್ಸಿಬಿ ಆಟಗಾರ ವಿರಾಟ್ ಕೊಹ್ಲಿ ಕೂಡ ಆರಂಭಿಕನಾಗಿ ಇದುವರೆಗೆ 4041 ರನ್ ಕಲೆಹಾಕಿದ್ದಾರೆ.

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



