IPL 2024: ಆರಂಭಿಕನಾಗಿ ವಿಶೇಷ ಮೈಲಿಗಲ್ಲು ದಾಟಿದ ಕನ್ನಡಿಗ ಕೆಎಲ್ ರಾಹುಲ್..!

Updated on: Apr 27, 2024 | 10:20 PM

IPL 2024: ಲಕ್ನೋ ತಂಡದ ಪರ ನಾಯಕ ಕೆಎಲ್ ರಾಹುಲ್ 48 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 76 ರನ್​ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಇದರೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಾರ್ವಕಾಲಿಕ ದಾಖಲೆ ಕೂಡ ನಿರ್ಮಿಸಿದರು.

1 / 6
ಲಕ್ನೋದ ಅಟಲ್ ವಿಹಾರಿ ವಾಜಪೇಯಿ ಐಕಾನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 197 ರನ್​ಗಳ ಗುರಿ ನೀಡಿದೆ.

ಲಕ್ನೋದ ಅಟಲ್ ವಿಹಾರಿ ವಾಜಪೇಯಿ ಐಕಾನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 197 ರನ್​ಗಳ ಗುರಿ ನೀಡಿದೆ.

2 / 6

ಲಕ್ನೋ ತಂಡದ ಪರ ನಾಯಕ ಕೆಎಲ್ ರಾಹುಲ್ 48 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 76 ರನ್​ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಇದರೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಾರ್ವಕಾಲಿಕ ದಾಖಲೆ ಕೂಡ ನಿರ್ಮಿಸಿದರು.

3 / 6

ವಾಸ್ತವವಾಗಿ ಈ ಪಂದ್ಯದಲ್ಲಿ 35 ರನ್ ಪೂರೈಸಿದ ಕೂಡಲೇ ರಾಹುಲ್ ಐಪಿಎಲ್‌ನಲ್ಲಿ ಆರಂಭಿಕರಾಗಿ 4000 ರನ್ ಪೂರೈಸಿದರು. ಇದರೊಂದಿಗೆ ಆರಂಭಿಕನಾಗಿ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಐದನೇ ಆಟಗಾರ ಹಾಗೂ ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ ಮೊದಲ ಆರಂಭಿಕ ಎನಿಸಿಕೊಂಡಿದ್ದಾರೆ.

4 / 6

ರಾಜಸ್ಥಾನ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ 4000 ರನ್ ಪೂರೈಸಲು ರಾಹುಲ್​ ಕೇವಲ 94 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ. ರಾಹುಲ್​ಗೂ ಮುನ್ನ ಇಬ್ಬರು ಭಾರತೀಯರು ಹಾಗೂ ಇಬ್ಬರು ವಿದೇಶಿ ಆಟಗಾರರು ಆರಂಭಿಕರಾಗಿ 4000 ರನ್​ಗಳ ಗಡಿ ದಾಟಿದ್ದಾರೆ.

5 / 6

ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಆರಂಭಿಕನಾಗಿ ಇದುವರೆಗೆ 6362 ರನ್ ಕಲೆಹಾಕಿದ್ದಾರೆ. ಎರಡನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮಾಜಿ ನಾಯಕ ಡೇವಿಡ್ ವಾರ್ನರ್ 5909 ರನ್ ಬಾರಿಸಿದ್ದಾರೆ.

6 / 6

ಮೂರನೇ ಸ್ಥಾನದಲ್ಲಿರುವ ಮಾಜಿ ಆರ್​ಸಿಬಿ ಆಟಗಾರ ಕ್ರಿಸ್ ಗೇಲ್ ಐಪಿಎಲ್‌ನಲ್ಲಿ ಆರಂಭಿಕನಾಗಿ 4480 ರನ್ ಬಾರಿಸಿದ್ದರೆ, ಮತ್ತೊಬ್ಬ ಆರ್​ಸಿಬಿ ಆಟಗಾರ ವಿರಾಟ್ ಕೊಹ್ಲಿ ಕೂಡ ಆರಂಭಿಕನಾಗಿ ಇದುವರೆಗೆ 4041 ರನ್ ಕಲೆಹಾಕಿದ್ದಾರೆ.

ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us