IPL 2024: ಐಪಿಎಲ್ ಆರಂಭಕ್ಕೂ ಮುನ್ನ ಗಾಯಗೊಂಡ, ತಂಡಗಳಿಗೆ ಕೈಕೊಟ್ಟ ಆಟಗಾರರಿವರು

IPL 2024: 17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಇನ್ನು 8 ದಿನಗಳು ಮಾತ್ರ ಉಳಿದಿವೆ. ಆದರೆ ಅದಕ್ಕೂ ಮುನ್ನ ಪ್ರತಿಬಾರಿಯಂತೆ ಈ ಬಾರಿಯೂ ಕೆಲವು ಐಪಿಎಲ್ ಫ್ರಾಂಚೈಸಿಗಳಿಗೆ ಆಟಗಾರರ ಅಲಭ್ಯತೆ ತಲೆನೋವಾಗಿ ಪರಿಣಮಿಸಿದೆ. ಇದರಲ್ಲಿ ಕೆಲವು ಆಟಗಾರರು ಇಂಜುರಿಗೊಂಡಿದ್ದರೆ, ಇನ್ನು ಕೆಲವರು ಕಾರಣಗಳನ್ನು ನೀಡಿ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

ಪೃಥ್ವಿಶಂಕರ
|

Updated on:Mar 14, 2024 | 4:14 PM

17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಇನ್ನು 8 ದಿನಗಳು ಮಾತ್ರ ಉಳಿದಿವೆ. ಆದರೆ ಅದಕ್ಕೂ ಮುನ್ನ ಪ್ರತಿಬಾರಿಯಂತೆ ಈ ಬಾರಿಯೂ ಕೆಲವು ಐಪಿಎಲ್ ಫ್ರಾಂಚೈಸಿಗಳಿಗೆ ಆಟಗಾರರ ಅಲಭ್ಯತೆ ತಲೆನೋವಾಗಿ ಪರಿಣಮಿಸಿದೆ. ಇದರಲ್ಲಿ ಕೆಲವು ಆಟಗಾರರು ಇಂಜುರಿಗೊಂಡಿದ್ದರೆ, ಇನ್ನು ಕೆಲವರು ಕಾರಣಗಳನ್ನು ನೀಡಿ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಅಂತಹವರ ಪಟ್ಟಿ ಇಲ್ಲಿದೆ.

1 / 10
ಲಕ್ನೋ ಸೂಪರ್ ಜೈಂಟ್ಸ್: ಭಾರತದಲ್ಲಿ ನಡೆದ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಮೂರು ಪಂದ್ಯಗಳನ್ನು ಆಡಿದ್ದ ಇಂಗ್ಲೆಂಡ್​ ತಂಡದ ವೇಗದ ಬೌಲರ್ ಮಾರ್ಕ್ ವುಡ್, ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಕೆಲಸದ ಹೊರೆ ನಿರ್ವಹಣೆ ಕಾರಣ ನೀಡಿ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಇದೀಗ ಅವರ ಬದಲಿಯಾಗಿ ಲಕ್ನೋ ತಂಡ ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

2 / 10
ಗುಜರಾತ್ ಟೈಟಾನ್ಸ್: ಕಳೆದ ಬಾರಿಯ ರನ್ನರ್​ಅಪ್ ಗುಜರಾತ್ ಟೈಟಾನ್ಸ್ ತಂಡಕ್ಕೆ ಮೊಹಮ್ಮದ್ ಶಮಿ ಅವರ ಅಲಭ್ಯತೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದೆ. ಕಳೆದ ತಿಂಗಳು ಹಿಮ್ಮಡಿ ಗಾಯಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೊಹಮ್ಮದ್ ಶಮಿ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಫ್ರಾಂಚೈಸಿ ಅವರಿಗೆ ಬದಲಿ ಆಟಗಾರನನ್ನು ಇನ್ನೂ ಹೆಸರಿಸಿಲ್ಲ.

3 / 10
ಏತನ್ಮಧ್ಯೆ, ತಂಡದ ವಿಕೆಟ್ ಕೀಪರ್-ಬ್ಯಾಟರ್ ಮ್ಯಾಥ್ಯೂ ವೇಡ್ ಕೂಡ ತಂಡದ ಮೊದಲ ಎರಡು ಪಂದ್ಯಗಳನ್ನು ಆಡುವುದು ಅನುಮಾನ ಎಂದು ವರದಿಯಾಗಿದೆ. ವೇಡ್ ಮಾರ್ಚ್ 21 ರಿಂದ 25 ರವರೆಗೆ ಆಸ್ಟ್ರೇಲಿಯಾ ದೇಶಿ ಟೂರ್ನಿ ಶೆಫೀಲ್ಡ್ ಶೀಲ್ಡ್ ಫೈನಲ್‌ನಲ್ಲಿ ಟ್ಯಾಸ್ಮೆನಿಯಾ ಪರ ಆಡುವ ಸಲುವಾಗಿ ಮೊದಲೆರಡು ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ.

4 / 10
ಕೋಲ್ಕತ್ತಾ ನೈಟ್ ರೈಡರ್ಸ್: ಪ್ರಸಕ್ತ ಸೀಸನ್​ನಲ್ಲಿ ಆಟಗಾರರ ಅಲಭ್ಯತೆಯಿಂದ ಹೆಚ್ಚು ತೊಂದರೆಗೀಡಾಗಿರುವ ತಂಡ ಕೆಕೆಆರ್. ಕೆಲವು ದಿನಗಳ ಹಿಂದೆ ವೇಗಿ ಗಸ್ ಅಟ್ಕಿನ್ಸನ್ ಕೆಲಸದ ಹೊರೆ ನಿರ್ವಹಣೆ ಕಾರಣ ನೀಡಿ ಐಪಿಎಲ್​ನಿಂದ ಹಿಂದೆ ಸರಿದಿದ್ದರು. ಅವರ ಬದಲಿಯಾಗಿ ತಂಡ ಲಂಕಾದ ವೇಗಿ ದುಷ್ಮಂತ ಚಮೀರ ಅವರನ್ನು ತಂಡಕ್ಕೆ ಸೇರಿಕೊಂಡಿದೆ. ಆದರೆ ಇದೀಗ ಚಮೀರ ಕೂಡ ಇಂಜುರಿಗೆ ತುತ್ತಾಗಿದ್ದಾರೆ. ಇದರಿಂದ ಅವರು ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯನ್ನು ಆಡುತ್ತಿಲ್ಲ. ಹೀಗಾಗಿ ಅವರು ಐಪಿಎಲ್ ಆಡುವುದು ಕೂಡ ಅನುಮಾನವಾಗಿದೆ.

5 / 10
ಅವರಲ್ಲದೆ ಮತ್ತೊಬ್ಬ ಇಂಗ್ಲೆಂಡ್ ಆಟಗಾರ ಜೇಸನ್ ರಾಯ್ ಕೂಡ ಇತ್ತೀಚೆಗೆ ಬಿಡುವಿಲ್ಲದ ವೇಳಾಪಟ್ಟಿಯನ್ನು ಉಲ್ಲೇಖಿಸಿ, ಕುಟುಂಬದೊಂದಿಗೆ ಸಮಯ ಕಳೆಯುವ ಸಲುವಾಗಿ ಐಪಿಎಲ್‌ನಿಂದ ತಮ್ಮ ಹೆಸರನ್ನು ಹಿಂಪಡೆದುಕೊಂಡಿದ್ದಾರೆ. ಅವರ ಬದಲಿಯಾಗಿ ತಂಡ ಫಿಲ್ ಸಾಲ್ಟ್ ಅವರನ್ನು ಆಯ್ಕೆ ಮಾಡಿದೆ.

6 / 10
ಈ ಇಬ್ಬರು ಆಟಗಾರರೊಂದಿಗೆ ತಂಡದ ನಾಯಕ ಶ್ರೇಯಸ್ ಅಯ್ಯರ್ ಕೂಡ ಆಡುವುದು ಅನುಮಾನವಾಗಿದೆ. ರಣಜಿ ಟ್ರೋಫಿ ಫೈನಲ್‌ನಲ್ಲಿ ಬೆನ್ನಿನ ಸಮಸ್ಯೆಗೆ ತುತ್ತಾಗಿದ್ದ ಅಯ್ಯರ್, ನಾಲ್ಕನೇ ದಿನ ಫೀಲ್ಡಿಂಗ್ ಮಾಡಲಿಲ್ಲ. ಅಲ್ಲದೆ ಪಂದ್ಯದ ಕೊನೆಯ ದಿನವೂ ಕಣಕ್ಕಿಳಿದಿರಲಿಲ್ಲ. ಹೀಗಾಗಿ ಅವರ ಇಂಜುರಿ ಎಷ್ಟು ಗಂಭೀರವಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಒಂದು ವೇಳೆ ಅಯ್ಯರ್ ಐಪಿಎಲ್ ಆಡದಿದ್ದರೆ ಕೆಕೆಆರ್ ತಂಡಕ್ಕೆ ಭಾರಿ ನಷ್ಟವಾಗಲಿದೆ.

7 / 10
ರಾಜಸ್ಥಾನ್ ರಾಯಲ್ಸ್: ತಂಡದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಇಂಜುರಿಗೊಳಗಗಾಗಿದ್ದು, ಅವರು ಸತತ ಎರಡನೇ ಬಾರಿಗೆ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಕಳೆದ ಬಾರಿಯೂ ಕೃಷ್ಣ ಇಂಜುರಿಯಿಂದಾಗಿ ಐಪಿಎಲ್ ಆಡಿರಲಿಲ್ಲ. ಕಳೆದ ತಿಂಗಳು ಕ್ವಾಡ್ರೈಸ್ಪ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೃಷ್ಣ ಈಗ ಬೆಂಗಳೂರಿನ ಎನ್‌ಸಿಎಯಲ್ಲಿ ಪುನರ್ವಸತಿಗೆ ಒಳಗಾಗಲಿದ್ದಾರೆ. ಅವರ ಬದಲಿ ಆಟಗಾರನನ್ನು ರಾಯಲ್ಸ್ ಇನ್ನೂ ಹೆಸರಿಸಿಲ್ಲ.

8 / 10
ಚೆನ್ನೈ ಸೂಪರ್ ಕಿಂಗ್ಸ್: ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಆಟಗಾರ ಡೆವೊನ್ ಕಾನ್ವೇ ಇತ್ತೀಚೆಗೆ ಹೆಬ್ಬೆರಳಿಗೆ ಗಾಯವಾಗಿದ್ದು, ಅದಕ್ಕಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇನ್ನೂ ಯಾವುದೂ ಅಧಿಕೃತವಾಗಿಲ್ಲವಾದರೂ, ಕಿವಿ ಬ್ಯಾಟರ್​ಗೆ ಎಂಟು ವಾರಗಳವರೆಗೆ ವಿಶ್ರಾಂತಿ ಅವಶ್ಯಕತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಮೊದಲಾರ್ಧದ ಐಪಿಎಲ್​ನಲ್ಲಿ ಕಾನ್ವೇ ಆಡುವುದು ಡೌಟ್.

9 / 10
ದೆಹಲಿ ಕ್ಯಾಪಿಟಲ್ಸ್: ನಿನ್ನೆಯಷ್ಟೇ ವೈಯಕ್ತಿಕ ಕಾರಣ ನೀಡಿ ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಇವರಲ್ಲದೆ, ವೇಗಿ ಜ್ಯೆ ರಿಚರ್ಡ್‌ಸನ್ ಕೂಡ ಗಾಯದಿಂದ ಬಳಲುತ್ತಿದ್ದು ಅವರು ಆಡುವ ಬಗ್ಗೆಯೂ ಯಾವುದೇ ಅಪ್​ಡೇಟ್ ಹೊರಬಿದ್ದಿಲ್ಲ.

10 / 10

Published On - 4:12 pm, Thu, 14 March 24

Follow us
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ

ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್

ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್

ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ

ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ