ಇನ್ನು ರಾಹುಲ್ ಅವರ ರನ್ ಬರದ ಬಗ್ಗೆ ಮಾತನಾಡಿದ ಅವರು, ‘ರಾಹುಲ್ ತಮ್ಮದೇ ಆದ ವಿಶಿಷ್ಟ ಶೈಲಿಯನ್ನು ಹೊಂದಿದ್ದಾರೆ, ಅದು ಅವರನ್ನು ಶ್ರೇಷ್ಠ ಕ್ರಿಕೆಟಿಗನನ್ನಾಗಿ ಮಾಡಿದೆ. ಈ ಐಪಿಎಲ್ ಅವರಿಗೆ ಕಷ್ಟಕರವಾಗಿತ್ತು. ಏಕೆಂದರೆ ನಮ್ಮ ತಂಡ ಪ್ರತಿ ಪಂದ್ಯದಲ್ಲೂ ನಿರಂತರವಾಗಿ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಇತ್ತು ಇದರಿಂದಾಗಿ ಅವರಿಗೆ ಮುಕ್ತವಾಗಿ ಆಡಲು ಅವಕಾಶ ಸಿಗಲಿಲ್ಲ.