IPL 2024: ಐಪಿಎಲ್ ಆಡಲು ಕೆಎಲ್ ರಾಹುಲ್ಗೆ ಗ್ರೀನ್ ಸಿಗ್ನಲ್ ನೀಡಿದ ಎನ್ಸಿಎ; ಆದರೆ..?
IPL 2024: ಐಪಿಎಲ್ ಆಡುವ ಅನುಮತಿ ಪಡೆದುಕೊಂಡಿರುವ ರಾಹುಲ್ ಮಾರ್ಚ್ 20, ಗುರುವಾರ ಲಕ್ನೋದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ. ಲಕ್ನೋ ತಂಡ ತನ್ನ ಮೊದಲ ಪಂದ್ಯವನ್ನು ಮಾರ್ಚ್ 24 ರಂದು ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ.
1 / 6
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದ ವೇಳೆ ಇಂಜುರಿಗೆ ತುತ್ತಾಗಿದ್ದ ಕನ್ನಡಿಗ ಕೆಎಲ್ ರಾಹುಲ್ ಆ ಬಳಿಕ ಟೀಂ ಇಂಡಿಯಾದಿಂದ ಹೊರಬಿದ್ದಿದ್ದರು. ಗಾಯಗೊಂಡಿದ್ದ ರಾಹುಲ್ರನ್ನು ಬಿಸಿಸಿಐ ರಿಹ್ಯಾಬ್ಗಾಗಿ ಬೆಂಗಳೂರಿಗೆ ಕಳುಹಿಸಿತ್ತು.
2 / 6
ಆ ನಂತರ ರಾಹುಲ್ ಇಡೀ ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿದ್ದರು. ಆಗಿನಿಂದ ಎನ್ಸಿಎನಲ್ಲಿ ರಿಹ್ಯಾಬ್ಗೆ ಒಳಗಾಗಿದ್ದ ರಾಹುಲ್, ಇದೀಗ ಸಂಪೂರ್ಣ ಫಿಟ್ ಆಗಿದ್ದು, ಐಪಿಎಲ್ ಅಖಾಡಕ್ಕೆ ದುಮುಕಲು ಸಿದ್ಧರಾಗಿದ್ದಾರೆ. ಅದಕ್ಕೆ ಪೂರಕವಾಗಿ ಎನ್ಸಿಎ ಕೂಡ ರಾಹುಲ್ ಫಿಟ್ ಎಂದು ಸರ್ಟಿಫಿಕೆಟ್ ನೀಡಿದೆ.
3 / 6
ಇದು ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಆನೆಬಲ ತಂದುಕೊಟ್ಟಿದೆ. ಆದರೆ ಲೀಗ್‌ನ ಆರಂಭದಲ್ಲೇ ಹೆಚ್ಚಿನ ಕೆಲಸದ ಹೊರೆ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಇದರರ್ಥ ಲೀಗ್‌ನ ಆರಂಭಿಕ ಪಂದ್ಯಗಳಲ್ಲಿ ರಾಹುಲ್ ವಿಕೆಟ್ ಕೀಪಿಂಗ್ ಮಾಡದಂತೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಸಲಹೆ ನೀಡಿದೆ. ಹೀಗಾಗಿ ರಾಹುಲ್ ಈ ಸೀಸನ್ನ ಆರಂಭಿಕ ಪಂದ್ಯಗಳಲ್ಲಿ ಕೇವಲ ಬ್ಯಾಟ್ಸ್‌ಮನ್ ಆಗಿ ಆಡುವುದನ್ನು ಕಾಣಬಹುದು.
4 / 6
ಸದ್ಯ ಐಪಿಎಲ್ ಆಡುವ ಅನುಮತಿ ಪಡೆದುಕೊಂಡಿರುವ ರಾಹುಲ್ ಮಾರ್ಚ್ 20, ಗುರುವಾರ ಲಕ್ನೋದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ. ಲಕ್ನೋ ತಂಡ ತನ್ನ ಮೊದಲ ಪಂದ್ಯವನ್ನು ಮಾರ್ಚ್ 24 ರಂದು ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ.
5 / 6
ಆರಂಭದಲ್ಲಿ ರಾಹುಲ್ ವಿಕೆಟ್ ಕೀಪಿಂಗ್ ಮಾಡದಂತೆ ಸಲಹೆ ನೀಡಲಾಗಿದ್ದು, ಆರಂಭಿಕ ಪಂದ್ಯಗಳಲ್ಲಿ ಬ್ಯಾಟ್ಸ್ ಮನ್ ಆಗಿ ಆಡಲಿದ್ದಾರೆ. ಆದಾಗ್ಯೂ, ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಮತ್ತು ವೆಸ್ಟ್ ಇಂಡೀಸ್‌ನ ನಿಕೋಲಸ್ ಪೂರನ್ ಅವರ ರೂಪದಲ್ಲಿ ಇಬ್ಬರು ಉತ್ತಮ ವಿಕೆಟ್‌ಕೀಪರ್‌ಗಳನ್ನು ಹೊಂದಿರುವುದರಿಂದ ಲಕ್ನೋ, ರಾಹುಲ್ ವಿಕೆಟ್ ಕೀಪಿಂಗ್ ಮಾಡದಿರುವ ಬಗ್ಗೆ ಹೆಚ್ಚು ಚಿಂತಿಸುವ ಅಗತ್ಯವಿಲ್ಲ.
6 / 6
ಲಕ್ನೋ ತಂಡ: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ಯುದ್ಧವೀರ್ ಸಿಂಗ್, ಪ್ರೇರಕ್ ಮಂಕಡ್, ಯಶ್ ಠಾಕೂರ್, ಅಮಿತ್ ಮಿಶ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಕೆ.ಗೌತಮ್, ಶಿವಂ ಮಾವಿ, ಅರ್ಶಿನ್ ಕುಲಕರ್ಣಿ, ಎಂ. ಸಿದ್ಧಾರ್ಥ್, ಆಶ್ಟನ್ ಟರ್ನರ್, ಡೇವಿಡ್ ವಿಲ್ಲಿ, ಮೊಹಮ್ಮದ್. ಅರ್ಷದ್ ಖಾನ್.