- Kannada News Photo gallery Cricket photos IPL 2024 MS Dhoni Becomes First Wicket-keeper To Reach 300 dismissals In T20 Format
IPL 2024: ಟಿ20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ನಿರ್ಮಿಸಿದ ಧೋನಿ..!
MS Dhoni: ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಹಾಗೂ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಎಂಎಸ್ ಧೋನಿ ವಿಕೆಟ್ ಹಿಂದೆ ವಿಶ್ವ ಕ್ರಿಕೆಟ್‌ನಲ್ಲಿ ಯಾವೊಬ್ಬ ವಿಕೆಟ್‌ಕೀಪರ್ ಮಾಡದ ಸಾಧನೆಯನ್ನು ಮಾಡಿದ್ದಾರೆ.
Updated on:Mar 31, 2024 | 11:10 PM

ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಹಾಗೂ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಎಂಎಸ್ ಧೋನಿ ವಿಕೆಟ್ ಹಿಂದೆ ವಿಶ್ವ ಕ್ರಿಕೆಟ್‌ನಲ್ಲಿ ಯಾವೊಬ್ಬ ವಿಕೆಟ್‌ಕೀಪರ್ ಮಾಡದ ಸಾಧನೆಯನ್ನು ಮಾಡಿದ್ದಾರೆ.

ವಾಸ್ತವವಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಆರಂಭಿಕ ಪೃಥ್ವಿ ಶಾ ಅವರ ಅದ್ಭುತ ಕ್ಯಾಚ್ ಹಿಡಿದ ಧೋನಿ ಟಿ20 ಕ್ರಿಕೆಟ್‌ನಲ್ಲಿ ವಿಕೆಟ್‌ಕೀಪರ್ ಆಗಿ 300ನೇ ವಿಕೆಟ್ ಉರುಳಿಸಿದ (ಕ್ಯಾಚ್ + ಸ್ಟಂಪ್) ಮೊದಲ ವಿಕೆಟ್‌ಕೀಪರ್ ಎಂಬ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಧೋನಿ ನಂತರ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆರ್ಸಿಬಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಚುಟುಕು ಮಾದರಿಯಲ್ಲಿ ಇದುವರೆಗೆ 276 ಔಟ್ ಮಾಡಿದ್ದಾರೆ. ಇದರಲ್ಲಿ 207 ವಿಕೆಟ್ಗಳು ಕ್ಯಾಚ್‌ಗಳಿಂದ ಬಂದಿವೆ.

ಮೂರನೇ ಸ್ಥಾನದಲ್ಲಿರುವ ಪಾಕಿಸ್ತಾನದ ಮಾಜಿ ವಿಕೆಟ್‌ಕೀಪರ್ ಕಮ್ರಾನ್ ಅಕ್ಮಲ್ 274 ವಿಕೆಟ್ಗಳನ್ನು ಉರುಸಿದ್ದರೆ, ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ 269 ವಿಕೆಟ್ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇದಲ್ಲದೆ ಈ ಆವೃತ್ತಿಯ ಮೂರು ಇನ್ನಿಂಗ್ಸ್‌ಗಳಲ್ಲಿ ನಾಲ್ಕು ಕ್ಯಾಚ್‌ಗಳನ್ನು ಹಿಡಿದಿರುವ ಧೋನಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಕ್ವಿಂಟನ್ ಡಿ ಕಾಕ್ ಅವರ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ.

ಡಿ ಕಾಕ್ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ ಒಟ್ಟು 220 ಕ್ಯಾಚ್‌ಗಳನ್ನು ಹಿಡಿದು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಧೋನಿ ಇದುವರೆಗೆ 213 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದೀಗ ಧೋನಿ, ಡಿ ಕಾಕ್ ಅವರನ್ನು ಹಿಂದಿಕ್ಕಲು ಕೇವಲ 8 ಕ್ಯಾಚ್‌ಗಳನ್ನು ಹಿಡಿಯಬೇಕಿದೆ.
Published On - 11:06 pm, Sun, 31 March 24




