- Kannada News Photo gallery Cricket photos IPL 2024 Mumbai Indians star pacer Jason Behrendorff ruled out of IPL 2024
IPL 2024: ಮುಂಬೈ ತಂಡದಿಂದ ಹೊರಬಿದ್ದ ಸ್ಟಾರ್ ವೇಗಿ! ಬದಲಿಯಾಗಿ ಬಂದಿದ್ಯಾರು?
IPL 2024: ಐಪಿಎಲ್ ಆರಂಭಕ್ಕೂ ಮೊದಲು ಮುಂಬೈ ಇಂಡಿಯನ್ಸ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ಜೇಸನ್ ಬೆಹ್ರೆಂಡಾರ್ಫ್ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಕಳೆದ ಆವೃತ್ತಿಯಲ್ಲಿ ತಂಡದ ಪ್ರಮುಖ ಆಟಗಾರರಾಗಿದ್ದ ಬೆಹ್ರೆಂಡಾರ್ಫ್ ಅಲಭ್ಯತೆ ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.
Updated on: Mar 18, 2024 | 9:35 PM

ಐಪಿಎಲ್ ಆರಂಭಕ್ಕೂ ಮೊದಲು ಮುಂಬೈ ಇಂಡಿಯನ್ಸ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ಜೇಸನ್ ಬೆಹ್ರೆಂಡಾರ್ಫ್ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಕಳೆದ ಆವೃತ್ತಿಯಲ್ಲಿ ತಂಡದ ಪ್ರಮುಖ ಆಟಗಾರರಾಗಿದ್ದ ಬೆಹ್ರೆಂಡಾರ್ಫ್ ಅಲಭ್ಯತೆ ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.

ಗಾಯದ ಕಾರಣದಿಂದಾಗಿ ಜೇಸನ್ ಬೆಹ್ರೆಂಡಾರ್ಫ್ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಅಲ್ಲದೆ ಬೆಹ್ರೆಂಡಾರ್ಫ್ ಬದಲಿಗೆ ಮುಂಬೈ ಇಂಡಿಯನ್ಸ್ ಇಂಗ್ಲೆಂಡ್‌ನ ಲ್ಯೂಕ್ ವುಡ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಇದೀಗ ಬದಲಿ ಆಟಗಾರನಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡಿರುವ ಲ್ಯೂಕ್ ವುಡ್ಗೆ ಇದು ಮೊದಲ ಐಪಿಎಲ್ ಸೀಸನ್ ಆಗಿದೆ. ಚೊಚ್ಚಲ ಐಪಿಎಲ್ ಆಡುತ್ತಿರುವ ಈ ಇಂಗ್ಲೆಂಡ್ ವೇಗಿಯನ್ನು ಐದು ಬಾರಿಯ ಚಾಂಪಿಯನ್ ಮುಂಬೈ ಅವರ ಮೂಲ ಬೆಲೆ 50 ಲಕ್ಷಕ್ಕೆ ತಂಡಕ್ಕೆ ಸೇರಿಸಿಕೊಂಡಿದೆ.

ಲ್ಯೂಕ್ ವುಡ್ ಇದುವರೆಗೆ ಇಂಗ್ಲೆಂಡ್ ಪರ ಕೇವಲ 2 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನು ಆಡಿದ್ದಾರೆ. ಏಕದಿನದಲ್ಲಿ ಒಂದೇ ಒಂದು ವಿಕೆಟ್ ಪಡೆಯದ ಲ್ಯೂಕ್ ವುಡ್ ಟಿ20 ಯಲ್ಲಿ 9.66 ರ ಎಕಾನಮಿಯೊಂದಿಗೆ 8 ವಿಕೆಟ್‌ಗಳನ್ನು ಪಡೆದಿದ್ದಾರೆ.

ಮತ್ತೊಂದೆಡೆ, ಜೇಸನ್ ಬೆಹ್ರೆನ್‌ಡಾರ್ಫ್ ಐಪಿಎಲ್‌ನಲ್ಲಿ ಇದುವರೆಗೆ 17 ಪಂದ್ಯಗಳನ್ನು ಆಡಿದ್ದು 19 ವಿಕೆಟ್‌ಗಳನ್ನು ಪಡೆದಿದ್ದಾರೆ. ಐಪಿಎಲ್‌ನ ಕೊನೆಯ ಸೀಸನ್ನಲ್ಲಿ ಅವರು ಮುಂಬೈ ಪರ 12 ಪಂದ್ಯಗಳನ್ನು ಆಡಿದ್ದರು. ಇದರಲ್ಲಿ 14 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಟಿಮ್ ಡೇವಿಡ್, ತಿಲಕ್ ವರ್ಮಾ, ಅರ್ಜುನ್ ತೆಂಡೂಲ್ಕರ್, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್, ನೆಹಾಲ್ ವಧೇರಾ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ಪಿಯೂಷ್ ಚಾವ್ಲಾ, ರೊಮಾರಿಯೊ ಶೆಫರ್ಡ್, ಜೆರಾಲ್ಡ್ ಕೋಟ್ಝಿ, ದಿಲ್ಶನ್ ಮಧುಶಂಕ, ಶ್ರೇಯಸ್ ಗೋಪಾಲ್, ನುವಾನ್ ತುಷಾರ, ಅನ್ಶುಲ್ ಕಾಂಬೋಜ್, ನಮನ್ ಧೀರ್, ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ, ಲ್ಯೂಕ್ ವುಡ್.




