Virat Kohli: ಐಪಿಎಲ್ನಲ್ಲಿ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್ ಭವಿಷ್ಯ ನಿರ್ಧಾರ..!
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 17ನೇ ಆವೃತ್ತಿಗೆ ಮಾರ್ಚ್ 22 ಕ್ಕೆ ಚಾಲನೆ ಸಿಗಲಿದೆ. ಮೊದಲ ಪಂದ್ಯದಲ್ಲಿ ಆರ್ಸಿಬಿ ಹಾಗೂ ಸಿಎಸ್ಕೆ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳಲಿದ್ದಾರೆ. ಅಂದರೆ ಕಳೆದ ಒಂದು ತಿಂಗಳಿಂದ ಕಿಂಗ್ ಕೊಹ್ಲಿ ಯಾವುದೇ ಪಂದ್ಯವಾಡಿಲ್ಲ. ಇದೀಗ IPL 2024 ರ ಮೂಲಕ ಮೈದಾನಕ್ಕೆ ಮರಳಲು ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ.
Updated on: Mar 12, 2024 | 9:23 AM

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನಲ್ಲಿ ನಡೆಯಲಿರುವ ಸಿಎಸ್ಕೆ (CSK) ವಿರುದ್ಧದ ಉದ್ಘಾಟನಾ ಪಂದ್ಯದ ಮೂಲಕ ಆರ್ಸಿಬಿ (RCB) ಐಪಿಎಲ್ ಅಭಿಯಾನ ಆರಂಭಿಸಲಿದೆ. ಇದೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಕೂಡ ಕಂಬ್ಯಾಕ್ ಮಾಡಲಿದ್ದಾರೆ.

ಅಂದರೆ ಜನವರಿ 17, 2024 ರ ಬಳಿಕ ವಿರಾಟ್ ಕೊಹ್ಲಿ ಯಾವುದೇ ಪಂದ್ಯವನ್ನಾಡಿಲ್ಲ. ಇದೀಗ ಐಪಿಎಲ್ ಮೂಲಕ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ಆದರೆ ಈ ಕಂಬ್ಯಾಕ್ ಕಿಂಗ್ ಕೊಹ್ಲಿಯ ಟಿ20 ವಿಶ್ವಕಪ್ ಭವಿಷ್ಯವನ್ನೂ ಕೂಡ ನಿರ್ಧರಿಸಲಿದೆ.

ಈ ಬಾರಿಯ ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ನೀಡುವುದಾಗಿ ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ. ಇತ್ತ ಕಳೆದ ಒಂದು ವರ್ಷದಿಂದ ಟಿ20 ತಂಡದಿಂದ ಹೊರಗುಳಿದಿದ್ದ ಕೊಹ್ಲಿ ಅಫ್ಘಾನಿಸ್ತಾನ್ ವಿರುದ್ಧದ ಸರಣಿ ಮೂಲಕ ಕಂಬ್ಯಾಕ್ ಮಾಡಿದ್ದರು.

ಆದರೆ ಈ ಸರಣಿಯಲ್ಲಿ 2 ಪಂದ್ಯಗಳನ್ನಾಡಿದ್ದ ಕೊಹ್ಲಿ ಒಂದು ಪಂದ್ಯದಲ್ಲಿ 29 ರನ್ ಬಾರಿಸಿದರೆ, ಮತ್ತೊಂದು ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿಯೇ ಟಿ20 ವಿಶ್ವಕಪ್ ತಂಡದ ಆಯ್ಕೆಗೆ ವಿರಾಟ್ ಕೊಹ್ಲಿಯನ್ನು ಪರಿಗಣಿಸಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಐಪಿಎಲ್ ಪ್ರದರ್ಶನವನ್ನು ಮುಂಬರುವ ಟಿ20 ವಿಶ್ವಕಪ್ ತಂಡದ ಆಯ್ಕೆಗೆ ಪರಿಗಣಿಸಲಾಗುವುದು ಎಂದು ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್ನಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡಲೇಬೇಕು. ಅಂದರೆ ಮಾತ್ರ ಅವರನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅದರಂತೆ ಈ ಬಾರಿಯ ಐಪಿಎಲ್ನಲ್ಲಿ ಕಿಂಗ್ ಕೊಹ್ಲಿ ಆರ್ಸಿಬಿ ಪರ ಮಿಂಚಿದರೆ ಮಾತ್ರ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಅವರ ಟಿ20 ವಿಶ್ವಕಪ್ ಭವಿಷ್ಯ ಐಪಿಎಲ್ನ 14 ಪಂದ್ಯಗಳ ಪ್ರದರ್ಶನದ ಮೇಲೆ ಅವಲಂಭಿತವಾಗಿರಲಿದೆ ಎಂದರೆ ತಪ್ಪಾಗಲಾರದು.



















