Virat Kohli: ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್ ಭವಿಷ್ಯ ನಿರ್ಧಾರ..!

| Updated By: ಝಾಹಿರ್ ಯೂಸುಫ್

Updated on: Mar 12, 2024 | 9:23 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) 17ನೇ ಆವೃತ್ತಿಗೆ ಮಾರ್ಚ್ 22 ಕ್ಕೆ ಚಾಲನೆ ಸಿಗಲಿದೆ. ಮೊದಲ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಲಿದ್ದಾರೆ. ಅಂದರೆ ಕಳೆದ ಒಂದು ತಿಂಗಳಿಂದ ಕಿಂಗ್ ಕೊಹ್ಲಿ ಯಾವುದೇ ಪಂದ್ಯವಾಡಿಲ್ಲ. ಇದೀಗ IPL 2024 ರ ಮೂಲಕ ಮೈದಾನಕ್ಕೆ ಮರಳಲು ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ.

1 / 6
ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನಲ್ಲಿ ನಡೆಯಲಿರುವ ಸಿಎಸ್​ಕೆ (CSK) ವಿರುದ್ಧದ ಉದ್ಘಾಟನಾ ಪಂದ್ಯದ ಮೂಲಕ ಆರ್​ಸಿಬಿ (RCB) ಐಪಿಎಲ್ ಅಭಿಯಾನ ಆರಂಭಿಸಲಿದೆ. ಇದೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಕೂಡ ಕಂಬ್ಯಾಕ್ ಮಾಡಲಿದ್ದಾರೆ.

2 / 6
ಅಂದರೆ ಜನವರಿ 17, 2024 ರ ಬಳಿಕ ವಿರಾಟ್ ಕೊಹ್ಲಿ ಯಾವುದೇ ಪಂದ್ಯವನ್ನಾಡಿಲ್ಲ. ಇದೀಗ ಐಪಿಎಲ್ ಮೂಲಕ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ಆದರೆ ಈ ಕಂಬ್ಯಾಕ್ ಕಿಂಗ್ ಕೊಹ್ಲಿಯ ಟಿ20 ವಿಶ್ವಕಪ್ ಭವಿಷ್ಯವನ್ನೂ ಕೂಡ ನಿರ್ಧರಿಸಲಿದೆ.

3 / 6
ಈ ಬಾರಿಯ ಐಪಿಎಲ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಅವಕಾಶ ನೀಡುವುದಾಗಿ ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ. ಇತ್ತ ಕಳೆದ ಒಂದು ವರ್ಷದಿಂದ ಟಿ20 ತಂಡದಿಂದ ಹೊರಗುಳಿದಿದ್ದ ಕೊಹ್ಲಿ ಅಫ್ಘಾನಿಸ್ತಾನ್ ವಿರುದ್ಧದ ಸರಣಿ ಮೂಲಕ ಕಂಬ್ಯಾಕ್ ಮಾಡಿದ್ದರು.

4 / 6
ಆದರೆ ಈ ಸರಣಿಯಲ್ಲಿ 2 ಪಂದ್ಯಗಳನ್ನಾಡಿದ್ದ ಕೊಹ್ಲಿ ಒಂದು ಪಂದ್ಯದಲ್ಲಿ 29 ರನ್ ಬಾರಿಸಿದರೆ, ಮತ್ತೊಂದು ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿಯೇ ಟಿ20 ವಿಶ್ವಕಪ್​ ತಂಡದ ಆಯ್ಕೆಗೆ ವಿರಾಟ್ ಕೊಹ್ಲಿಯನ್ನು ಪರಿಗಣಿಸಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

5 / 6
ಐಪಿಎಲ್​ ಪ್ರದರ್ಶನವನ್ನು ಮುಂಬರುವ ಟಿ20 ವಿಶ್ವಕಪ್ ತಂಡದ ಆಯ್ಕೆಗೆ ಪರಿಗಣಿಸಲಾಗುವುದು ಎಂದು ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡಲೇಬೇಕು. ಅಂದರೆ ಮಾತ್ರ ಅವರನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

6 / 6
ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಕಿಂಗ್ ಕೊಹ್ಲಿ ಆರ್​ಸಿಬಿ ಪರ ಮಿಂಚಿದರೆ ಮಾತ್ರ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಅವರ ಟಿ20 ವಿಶ್ವಕಪ್ ಭವಿಷ್ಯ ಐಪಿಎಲ್​ನ 14 ಪಂದ್ಯಗಳ ಪ್ರದರ್ಶನದ ಮೇಲೆ ಅವಲಂಭಿತವಾಗಿರಲಿದೆ ಎಂದರೆ ತಪ್ಪಾಗಲಾರದು.